ಕುಂದಾಪುರ, ಅ.8: ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ವೇದಿಕೆಯ ವತಿಯಿಂದ ‘ಶಿ ಕೇರ್ಸ್: ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ’ವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಡಾ. ಸೋನಿ ಡಿಕೋಸ್ಟಾ ಅವರು ಮಾತನಾಡಿ, ವಿದ್ಯಾರ್ಥಿಗಳು ಆರೋಗ್ಯಕರ ಜೀವನಶೈಲಿ, ಉತ್ತಮ ಆಹಾರ ಪದ್ಧತಿ, ವೈಯಕ್ತಿಕ ನೈರ್ಮಲ್ಯ ಹಾಗೂ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳುವ ಮೂಲಕ ಆರೋಗ್ಯಕರ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ನಾಗರಾಜ ವೈದ್ಯ ಎಂ. ಅವರು ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಆರೋಗ್ಯಕರ ಅಭ್ಯಾಸಗಳು ಮತ್ತು ಉತ್ತಮ ಜೀವನಶೈಲಿಯ ಮಹತ್ವವನ್ನು ತಿಳಿಸಿದರು.
ಮಹಿಳಾ ವೇದಿಕೆಯ ಸಂಚಾಲಕರಾದ ಶೋಭಾ ಕೆ ಕಾರ್ಯಕ್ರಮವನ್ನುದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಿಳಾ ವೇದಿಕೆಯ ವಿದ್ಯಾರ್ಥಿನಿ ಪ್ರತಿನಿಧಿಗಳು ಕಾರ್ಯಕ್ರಮವನ್ನು ಆಯೋಜನೆ ಮಾಡಿದರು. ಐಕ್ಯೂಎಸಿ ಘಟಕದ ಸಂಚಾಲಕರಾದ ಮೋಹಿನಿ ಅತ್ತಿಮನಿ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ತರಾದ ಡಾ. ಭಾಗೀರಥಿ ನಾಯ್ಕ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಿಸರ್ಗ ಕಾರ್ಯಕ್ರಮ ನಿರೂಪಿಸಿದರು.




By
ForthFocus™