Sunday, October 11, 2026
Sunday, October 11, 2026

ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್‌ ಮ್ಯಾನೇಜ್ಮೆಂಟ್: ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್‌ ಮ್ಯಾನೇಜ್ಮೆಂಟ್: ವಿದ್ಯಾರ್ಥಿ ಪರಿಷತ್ ಉದ್ಘಾಟನೆ

Date:

ಕಟಪಾಡಿ, ಅ.10: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್‌ ಮ್ಯಾನೇಜ್ಮೆಂಟ್ ನ ವಿದ್ಯಾರ್ಥಿ ಪರಿಷತ್‌ನ ಉದ್ಘಾಟನಾ ಸಮಾರಂಭ ನಡೆಯಿತು. ದೀಪ ಪ್ರಜ್ವಲಿಸಿ ಹಾಗೂ ಮಟ್ಟುಗುಳ್ಳದ ಸಸಿಗೆ ನೀರು ಹಾಕುವ ಮೂಲಕ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಆತ್ಮವಿಶ್ವಾಸ, ಶಿಸ್ತು ಹಾಗೂ ಸಂಘಟನಾ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಡಾ.ರಾಘವೇಂದ್ರ ಹೊಳ್ಳ, ಅಧ್ಯಕ್ಷರು ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ ಮಂಗಳೂರು, ಕಿಶನ್ ಹೆಗ್ಡೆ, ಅಧ್ಯಕ್ಷರು ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಕೆ.ಸತ್ಯೇಂದ್ರ ಪೈ, ಸಂಚಾಲಕರು, ಎಸ್.ವಿ.ಎಸ್ ವಿದ್ಯಾವರ್ಧಕ ಸಂಘ, ಕಟಪಾಡಿ ಭಾಗವಹಿಸಿದ್ದರು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಡಾ.ರಾಘವೇಂದ್ರ ಹೊಳ್ಳ ಅವರು, ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ವಿಕಸನದ ಪ್ರಮುಖ ಘಟ್ಟವಾಗಿದ್ದು, ಈ ಹಂತದಲ್ಲಿ ನಾಯಕತ್ವ, ಸಮಯಪಾಲನೆ, ಶಿಸ್ತು ಮತ್ತು ತಂಡದೊಂದಿಗೆ ಕಾರ್ಯನಿರ್ವಹಿಸುವ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದರು. ಪಠ್ಯಪುಸ್ತಕದ ಜ್ಞಾನದ ಜೊತೆಗೆ ಪ್ರಾಯೋಗಿಕ ಅನುಭವ, ಸಂವಹನ ಕೌಶಲ್ಯ ಮತ್ತು ಸಾಮಾಜಿಕ ಜವಾಬ್ದಾರಿಗೂ ವಿದ್ಯಾರ್ಥಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಕಿಶನ್ ಹೆಗ್ಡೆ ಅವರು ವಿದ್ಯಾರ್ಥಿ ಪರಿಷತ್‌ನ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ನಿರ್ವಹಿಸಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ ಮತ್ತು ನಾಯಕತ್ವದ ಸಾಮರ್ಥ್ಯವನ್ನು ಅನಾವರಣಗೊಳಿಸುವ ಪರಿಣಾಮಕಾರಿ ವೇದಿಕೆಯಾಗಬೇಕು ಎಂದು ಅಭಿಪ್ರಾಯಪಟ್ಟರು. ಕೆ.ಸತ್ಯೇಂದ್ರ ಪೈ ಅವರು ತ್ರಿಶಾ ವಿದ್ಯಾರ್ಥಿಗಳು ಕನ್ನಡ ಮಾಧ್ಯಮ ಶಾಲೆಗೆ ಅಪಾರ ಕೊಡುಗೆ ನೀಡುತ್ತಾ ಬಂದಿದ್ದು ಅವರ ಕಾರ್ಯವನ್ನು ಶ್ಲಾಘಿಸಿದರು.

ನೂತನ ವಿದ್ಯಾರ್ಥಿ ಪರಿಷತ್‌ನ ಪದಾಧಿಕಾರಿಗಳಿಗೆ ಪ್ರಾಂಶುಪಾಲರಾದ ವಿಘ್ನೇಶ್ ಶೆಣೈ ಪ್ರಮಾಣ ವಚನ ಬೋಧಿಸಿದರು. ಇದೇ ಸಂದರ್ಭ ತ್ರಿಶಾ ವಿದ್ಯಾರ್ಥಿಗಳು ಗಣೇಶ ಚತುರ್ಥಿಗೆ ವೇಷ ತೊಟ್ಟು ಬಂದ ಹಣದಲ್ಲಿ ಕಟಪಾಡಿ ಎಸ್.ವಿ.ಎಸ್ ಕನ್ನಡ ಮಾಧ್ಯಮ ಶಾಲೆಗೆ ಕ್ರೀಡಾ ಸಾಮಗ್ರಿಯನ್ನು ಶಾಲಾ ಮುಖ್ಯಸ್ಥರಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಅಕಾಡೆಮಿಕ್ ಮ್ಯಾನೇಜರ್ ಶಾಂತಪ್ರಿಯ, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರೊ. ಕುಲದೀಪ್ ವೈ.ಯು., ನೂತನ ವಿದ್ಯಾರ್ಥಿ ನಾಯಕಿ ಆಂತರ್ಯ ಶೆಟ್ಟಿ, ಉಪನಾಯಕ ಅನಿರುದ್ಧ, ವಿದ್ಯಾರ್ಥಿ ಪರಿಷತ್‌ನ ಉಸ್ತುವಾರಿ ಉಪನ್ಯಾಸಕ ರಾಮದಾಸ್ ನಾಯಕ್, ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕರಾದ ಪಲ್ಲವಿ ಸ್ವಾಗತಿಸಿದರು, ಸ್ನೇಹ ವಂದಿಸಿದರು. ವಿದ್ವಾನ್ ವಾಗೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.11-21: ವೈಭವದ ಉಚ್ಚಿಲ ದಸರಾ

ಉಡುಪಿ, ಅ.10: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ...

ತ್ರಿಶಾ ವಿದ್ಯಾ ಕಾಲೇಜು: ರಕ್ತದಾನ ಶಿಬಿರ: 100ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ರಕ್ತದಾನ

ಕಟಪಾಡಿ, ಅ. 10: ರಕ್ತದಾನ ಮಹಾದಾನ ಎಂಬ ಸಂದೇಶವನ್ನು ಸಾರುವ ಉದ್ದೇಶದಿಂದ...

ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ

ಉಡುಪಿ, ಅ.10: ರಾಷ್ಟ್ರೀಯ ರಕ್ಷಣಾ ಪಡೆ ಮತ್ತು ನೇವಲ್ ಅಕಾಡೆಮಿಗೆ ಸೇರಬಯಸುವವರಿಗೆ...

ಮುಂದಿನ ವರ್ಷದ ಏಪ್ರಿಲ್ ವರೆಗೆ ಜಾಗತಿಕ ಮಾರುಕಟ್ಟೆಗಳಲ್ಲಿ ರಷ್ಯಾದ ಡೀಸೆಲ್ ಮಾರಾಟದ ಮೇಲಿನ ನಿರ್ಬಂಧ ತೆಗೆದು ಹಾಕಿದ ಅಮೆರಿಕ

ಯು.ಬಿ.ಎನ್.ಡಿ., ಅ.10: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ಅಧ್ಯಕ್ಷ...
error: Content is protected !!