Saturday, October 10, 2026
Saturday, October 10, 2026

ಪಿಎಂಶ್ರೀ ಶಾಲೆಯಲ್ಲಿ ಸರಸ್ವತಿ ವಿದ್ಯಾಲಯದ ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

ಪಿಎಂಶ್ರೀ ಶಾಲೆಯಲ್ಲಿ ಸರಸ್ವತಿ ವಿದ್ಯಾಲಯದ ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Date:

ಶಿರೂರು, ಅ.10: ಕಾಲ ಕಳೆಯುವ ಮೊದಲು ನಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರಕೃತಿ ಮತ್ತು ಜನರನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಜೀವನದಲ್ಲಿ ಯಶಸ್ಸು ಖಂಡಿತ ಸಿಗುತ್ತದೆ ಎಂದು ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಅರುಣ್ ಕುಮಾರ್ ಶಿರೂರು ಅವರು ಅಭಿಪ್ರಾಯಪಟ್ಟರು ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಬೈಂದೂರು ವಲಯದ ಶಿರೂರಿನ ಪಿ ಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದ ದಿಕ್ಸೂಚಿ ಭಾಷಣದಲ್ಲಿ ಅಭಿಪ್ರಾಯಪಟ್ಟರು.

ಮೂಕಾಂಬಿಕ ಕಾಪರ್ ಇಂಡಸ್ಟ್ರೀಸ್ ಕೊಡಪಾಡಿಯ ಮಾಲೀಕರಾದ ಉಮೇಶ್ ಎಲ್ ಮೇಸ್ತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಎನ್ಎಸ್ಎಸ್ ಶಿಬಿರಗಳು ಬದುಕನ್ನು ಅರ್ಥ ಮಾಡಿಕೊಳ್ಳಲು ಕಲಿಸುತ್ತದೆ. ಕಷ್ಟಗಳನ್ನು ಎದುರಿಸುವಲ್ಲಿನ ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್‌.ವಿ.ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ,ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಎನ್ ಸದಾಶಿವ ನಾಯಕ್ ಪಿ.ಎಂ.ಶ್ರೀ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಕೃಷ್ಣ ಬಿ ಪೂಜಾರಿ ಪಿ.ಎಂ.ಶ್ರೀ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರವೀಂದ್ರ ಆರ್ ಶೆಟ್ಟಿ, ಎಸ್ ಡಿ ಸಿ ಅಧ್ಯಕ್ಷ ಚಿಕ್ಕು ಪೂಜಾರಿ, ಕಾರ್ಯದರ್ಶಿ ಪ್ರಸಾದ್ ಪ್ರಭು ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಭಾಸ್ಕರ್ ಹೆಚ್ ಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ ಕೆ ಪ್ರಸ್ತಾವಿಕ ಮಾತುಗಳನ್ನಾಡಿದರು. ಪ್ರಾರ್ಥನಾ ಮತ್ತು ಅಂಕಿತಾ ಅತಿಥಿಗಳನ್ನು ಪರಿಚಯಿಸಿದರು. ಸಾನಿಕ ಸ್ವಾಗತಿಸಿದರು. ಅದಿತಿ ಪ್ರಾರ್ಥಿಸಿದರು. ದೀಪಾಲಿ ಕಾರ್ಯಕ್ರಮ ನಿರೂಪಿಸಿ ವೈಷ್ಣವಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುಂದಿನ ವರ್ಷದ ಏಪ್ರಿಲ್ ವರೆಗೆ ಜಾಗತಿಕ ಮಾರುಕಟ್ಟೆಗಳಲ್ಲಿ ರಷ್ಯಾದ ಡೀಸೆಲ್ ಮಾರಾಟದ ಮೇಲಿನ ನಿರ್ಬಂಧ ತೆಗೆದು ಹಾಕಿದ ಅಮೆರಿಕ

ಯು.ಬಿ.ಎನ್.ಡಿ., ಅ.10: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ಅಧ್ಯಕ್ಷ...

ಸಾಹಿತ್ಯ ಕೃತಿಗಳು ಬದುಕನ್ನು ಸೂಕ್ಷ್ಮವಾಗಿ ಅರ್ಥೈಸಲು ಸಹಕಾರಿ: ಡಾ. ರೇಖಾ ವಿ ಬನ್ನಾಡಿ

ಉಡುಪಿ, ಅ.10: ಕರಾವಳಿಯು ಸಮೃದ್ಧ ಸಾಂಸ್ಕೃತಿಕ ಹಾಗೂ ಮೌಖಿಕ ಪರಂಪರೆ ಹೊಂದಿದೆ....

ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಡುಪಿ, ಅ.10: ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಏನ್.ಎಸ್.ಎಸ್...

ಕಲಾ ಪ್ರತಿಭೋತ್ಸವ: ಅರ್ಜಿ ಆಹ್ವಾನ

ಉಡುಪಿ, ಅ.10: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಕ್ಕಳು ಮತ್ತು ಯುವಜನರಲ್ಲಿರುವ...
error: Content is protected !!