Friday, November 6, 2026
Friday, November 6, 2026

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

Date:

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಹಾಗೂ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಜರಗಿದ 20ನೇ ವರ್ಷದ ಗಣೇಶೋತ್ಸವ ಸಂಭ್ರಮದ ಲೆಕ್ಕಪತ್ರ ಮಂಡನೆ ಮತ್ತು ಕೃತಜ್ಞತಾ ಸಭೆಯು ಆದಿತ್ಯವಾರ ಅಬ್ಬನಡ್ಕ ಸಂಘದ ರಜತ ಮಹೋತ್ಸವ ಸಭಾಂಗಣದಲ್ಲಿ ಜರಗಿತು.

ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಅವರು ಮಾತನಾಡಿ, 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಂಭ್ರಮವು ನಮ್ಮೆಲ್ಲರ ನಿರೀಕ್ಷೆಗೂ ಮಿಗಿಲಾಗಿ ಅದ್ಭುತ ಯಶಸ್ಸು ಕಂಡಿದೆ. ಈ ಯಶಸ್ಸಿನಿಂದ ಸಹಕರಿಸಿದ ವಿವಿಧ ಸಮಿತಿಯಲ್ಲಿ ಶ್ರಮಿಸಿದ ಸಂಘದ ಸದಸ್ಯರೆಲ್ಲರಿಗೂ, ಸಂಘದ ದಾನಿಗಳಿಗೆ, ಹಿತೈಷಿಗಳಿಗೆ, ಅಭಿಮಾನಿಗಳಿಗೆ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಪ್ರತಿಯೊಬ್ಬರಿಗೂ ನಾನು ಆಭಾರಿಯಾಗಿದ್ದೇನೆ ಎಂದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಅಧ್ಯಕ್ಷರಾದ ಸುರೇಶ್ ಪೂಜಾರಿ ಅಬ್ಬನಡ್ಕ ಅವರ ಅಧ್ಯಕ್ಷತೆಯಲ್ಲಿ ಸಭೆ ಜರಗಿತು.

ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾದ ದಿನೇಶ್ ಪೂಜಾರಿ ಬೀರೋಟ್ಟು, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಸುವರ್ಣ, ಸಂಫದ ಪೂರ್ವ ಅಧ್ಯಕ್ಷರಾದ ರಘುವೀರ್ ಶೆಟ್ಟಿ, ಆನಂದ ಪೂಜಾರಿ, ರಾಜೇಶ್ ಕೋಟ್ಯಾನ್, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನ ಕೋಟ್ಯಾನ್, ನೂತನ ಉಪಾಧ್ಯಕ್ಷ ಹರಿಣಿ ಪೂಜಾರಿ, ನೂತನ ಜೊತೆ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ನೂತನ ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಆಚಾರ್ಯ ಸ್ವಾಗತಿಸಿ, ಕಾರ್ಯದರ್ಶಿ ಸತೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ಸುಭಾಷ್ ಕುಮಾರ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಲ್ಕು ರಾಷ್ಟ್ರಗಳ ನೌಕಾಪಡೆಗಳೊಂದಿಗೆ ಐಎನ್ಎಸ್ ಸಹ್ಯಾದ್ರಿ

ನವದೆಹಲಿ, ನ.5: ಭಾರತೀಯ ನೌಕಾಪಡೆಯ ಸ್ಥಳೀಯ ಮಾರ್ಗದರ್ಶಿ ಕ್ಷಿಪಣಿ ಸ್ಟೆಲ್ತ್ ಫ್ರಿಗೇಟ್,...

ಗಯಾನಾದಲ್ಲಿ ರಸ್ತೆ, ಆರೋಗ್ಯ ಮತ್ತು ರಕ್ಷಣಾ ಯೋಜನೆಗಳಿಗಾಗಿ 500 ಮಿಲಿಯನ್ ಡಾಲರ್ ಸಾಲ ಸೌಲಭ್ಯವನ್ನು ಘೋಷಿಸಿದ ಭಾರತ

ನವದೆಹಲಿ, ನ.5: ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್....

ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸ್ಫರ್ಧೆ

ಉಡುಪಿ, ನ.5: ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿಯ ಬ್ರಹ್ಮಗಿರಿಯ...

ತೆಂಗಿನ ತೋಟಗಳ ಪುನಶ್ಚೇತನ ಕಾರ್ಯಕ್ರಮದಡಿ ಸಹಾಯಧನ

ಉಡುಪಿ, ನ.5: ಉಡುಪಿ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುತ್ಪಾದಕ...
error: Content is protected !!