Friday, October 16, 2026
Friday, October 16, 2026

ತೆಂಕನಿಡಿಯೂರು ಕಾಲೇಜು: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ‘ಸಂಚಾರಿ ನೋಂದಣಿ’ ಕಾರ್ಯಕ್ರಮ

ತೆಂಕನಿಡಿಯೂರು ಕಾಲೇಜು: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ‘ಸಂಚಾರಿ ನೋಂದಣಿ’ ಕಾರ್ಯಕ್ರಮ

Date:

ತೆಂಕನಿಡಿಯೂರು, ಅ 14: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಂತರಿಕ ಗುಣಮಟ್ಟ ಭರವಸೆ ಕೋಶ, ವಾಣಿಜ್ಯಶಾಸ್ತ್ರದ ಸ್ನಾತಕೋತ್ತರ ವಿಭಾಗ ಹಾಗೂ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೋಶದ ಜಂಟಿ ಆಶ್ರಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ, ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜಾಬ್ ಕಾರ್ಡ್ ನೋಂದಣಿ ಮಾಡಿಸಿ, ವಿತರಿಸಲಾಯಿತು. ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಲಹೆಗಾರರು ಹಾಗೂ ತರಬೇತುದಾರರಾದ ಲಕ್ಷ್ಮೀ ಸುವರ್ಣ ರವರು ಮಾತನಾಡಿ ವಿದ್ಯಾರ್ಥಿಗಳಿಗೆ ಉದ್ಯೋಗ ಕಾರ್ಡ್ ನೋಂದಣಿ ಪ್ರಕ್ರಿಯೆ, ಅದರ ಪ್ರಾಮುಖ್ಯತೆ ಮತ್ತು ಸರಕಾರದಿಂದ ಲಭ್ಯವಿರುವ ಉದ್ಯೋಗಾವಕಾಶ ಹಾಗೂ ತರಬೇತಿ ಯೋಜನೆಗಳ ಕುರಿತು ವಿಸ್ತಾರವಾಗಿ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ ಗಾಂವ್ಕರ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉದ್ಯೋಗ ವಿನಿಮಯ ಕೇಂದ್ರ ಇದರ ಸಹಾಯಕರಾದ ಲತಾ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬಿಂದು ಟಿ., ಸಹ ಪ್ರಾಧ್ಯಾಪಕರಾದ ಉಮೇಶ್ ಪೈ, ಉಪನ್ಯಾಸಕರಾದ ಚೈತ್ರ ಹಾಗೂ ಉದ್ಯೋಗ ಮಾಹಿತಿ ಅಧಿಕಾರಿಗಳಾದ ಮರ್ವಿನ್ ಡಿಸೋಜ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶುಭಲಕ್ಷ್ಮಿ ನಿರೂಪಿಸಿದರು. ಶಿಲ್ಪಪ್ರಿಯ ಸ್ವಾಗತಿಸಿದರು ಹಾಗೂ ನವೀನ ಜಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹಜ್ಯೋತಿ ಯೋಜನೆಯ ದಾಖಲೆ ಮರುಪರಿಶೀಲನಾ ಪ್ರಕ್ರಿಯೆ ಅ. 31 ರ ವಿಸ್ತರಣೆ: ರಮೇಶ್ ಕಾಂಚನ್

ಉಡುಪಿ, ಅ.16: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ...

ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ

ಉಡುಪಿ, ಅ.16: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ...

ಅ. 17: ನೇರ ಸಂದರ್ಶನ

ಉಡುಪಿ, ಅ.16: ನಗರದ ಗ್ರೋಸ್ಪೆರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ...

ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಬಿ.ಎಸ್.ಎನ್.ಎಲ್ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಕರೆ

ಉಡುಪಿ, ಅ.16: ಜಿಲ್ಲೆಯ ಬಿ.ಎಸ್.ಎನ್.ಎಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ನೆಟ್‌ವರ್ಕ್ ಸಂಬಂಧಿತ...
error: Content is protected !!