Friday, October 16, 2026
Friday, October 16, 2026

ತಾಲೂಕು ಮಟ್ಟದ ಯುವ ಸಂಸತ್ತು ಸಭೆ

ತಾಲೂಕು ಮಟ್ಟದ ಯುವ ಸಂಸತ್ತು ಸಭೆ

Date:

ಕಾರ್ಕಳ, ಅ.16: ಪ್ರಪಂಚದಲ್ಲಿಯೇ ಅತ್ಯಂತ ಬಲಿಷ್ಟವಾದ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು. ಯಾವುದೇ ಕ್ಷೇತ್ರದಲ್ಲಿ ತಾವು ಯಶಸ್ವಿಯಾಗಬೇಕಾದರೆ ಪೂರ್ವಸಿದ್ಧತೆ ಎಂಬುದು ಬಹಳ ಮುಖ್ಯ. ಈ ವಿಚಾರವನ್ನು ಇಂದಿನ ಯುವಕರು ಅರ್ಥಮಾಡಿಕೊಳ್ಳಬೇಕು. ಆ ಮೂಲಕ ರಾಷ್ಟ್ರದುನ್ನತಿಗೆ, ನಾಡ ಏಳಿಗೆಗೆ ಬದ್ಧರಾಗಬೇಕು ಎಂದು ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಹೇಳಿದರು. ಅವರು ತಾಲೂಕು ಸಾಕ್ಷರತ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ನಡೆದ ತಾಲೂಕು ಯುವಸಂಸತ್ತು ಸಭೆ -೨೦೨೬ರ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ್ ಪೂಜಾರಿ ಮಾತನಾಡಿ, ನಮ್ಮ ದೇಶದ ಪರಂಪರೆಯನ್ನು ಗೌರವಿಸಿಕೊಂಡು, ಉಳಿಸಿಕೊಂಡು, ಬೆಳೆಸಿಕೊಂಡು ದೇಶ, ರಾಜ್ಯ ಪ್ರಜ್ವಲಿಸುವಂತೆ ಇಂದಿನ ಯುವಜನತೆ ಸಂಕಲ್ಪತೊಡಬೇಕು ಎಂದು ಕರೆಕೊಟ್ಟರು.

ವೇದಿಕೆಯಲ್ಲಿ ಹೆಬ್ರಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಂಕರ್ ಶೇರಿಗಾರ್, ಹೆಬ್ರಿ ತಾ. ಪಂ. ಕಾರ್ಯನಿರ್ವಹಣಾಧಿಕಾರಿ ದಿನೇಶ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬಿ ನಾಯ್ಕ್, ಕಾರ್ಕಳ ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಉಡುಪಿಯ ವೈಕುಂಠ ಬಾಳಿಗ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ನವೀನ್‌ಚಂದ್ರ ಹಾಗೂ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರ್ ಉಪಸ್ಥಿತರಿದ್ದರು.

ಕಾರ್ಕಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ ಪ್ರಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿ, ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಇಂದಿರಾ ವಂದಿಸಿ, ಸ.ಪ.ಪೂರ್ವ ಕಾಲೇಜು ಹೆಬ್ರಿಯ ಉಪನ್ಯಾಸಕ ಪ್ರವೀಣ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಅಣಕು ಯುವ ಸಂಸತ್ ಸಭೆ ಸ್ಪರ್ಧೆ: ತಾಲೂಕಿನ ವಿವಿಧ ಶಾಲಾ ಕಾಲೇಜುಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಂದ ಅಣಕು ಸಂಸತ್ತು ಸಭಾ ಸ್ಪರ್ಧೆ ನಡೆಯಿತು. ತೀರ್ಪಗಾರರಾಗಿ, ಉಪನ್ಯಾಸಕರಾದ ಪ್ರಮೋದ್ ನಾಯ್ಕ್, ಜಗದೀಶ್ ನಾಯಕ್, ಬಬಿತಾ ಪ್ರಸಾದ್ ಹಾಗೂ ವಕೀಲರಾದ ಲೋಲಾಕ್ಷ ಸಹಕರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹಜ್ಯೋತಿ ಯೋಜನೆಯ ದಾಖಲೆ ಮರುಪರಿಶೀಲನಾ ಪ್ರಕ್ರಿಯೆ ಅ. 31 ರ ವಿಸ್ತರಣೆ: ರಮೇಶ್ ಕಾಂಚನ್

ಉಡುಪಿ, ಅ.16: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ...

ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ

ಉಡುಪಿ, ಅ.16: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ...

ಅ. 17: ನೇರ ಸಂದರ್ಶನ

ಉಡುಪಿ, ಅ.16: ನಗರದ ಗ್ರೋಸ್ಪೆರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ...

ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಬಿ.ಎಸ್.ಎನ್.ಎಲ್ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಕರೆ

ಉಡುಪಿ, ಅ.16: ಜಿಲ್ಲೆಯ ಬಿ.ಎಸ್.ಎನ್.ಎಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ನೆಟ್‌ವರ್ಕ್ ಸಂಬಂಧಿತ...
error: Content is protected !!