Saturday, November 7, 2026
Saturday, November 7, 2026

ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ

ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ

Date:

ಉಡುಪಿ, ಅ.16: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ ವತಿಯಿಂದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಉಡುಪಿ ಜಿಲ್ಲೆಯ ಉಡುಪಿ ತಾಲೂಕಿಗೆ ಒಳಪಟ್ಟಂತೆ ಗುರಿ ನಿಗದಿಪಡಿಸಲಾಗಿದ್ದು, ಪ್ರಸಕ್ತ ಸಾಲಿಗೆ ಉಡುಪಿ ತಾಲೂಕಿನ ಪ.ಜಾತಿ/ಪ.ಪಂ/ಹಿಂದುಳಿದ ವರ್ಗ/ಸಾಮಾನ್ಯ ವರ್ಗದ ಅರ್ಹ ಗ್ರಾಮೀಣ ರೈತ ಮಹಿಳೆಯರಿಂದ 5 ವಾರದ 20 ದೇಶಿ/ನಾಟಿ ಕೋಳಿ ಮರಿಗಳ ವಿತರಿಸಿ, ಅವರ ಆದಾಯ ಹೆಚ್ಚಿಸುವ ಕಾರ್ಯಕ್ರಮ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತ ಮಹಿಳೆಯರು ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶುವೈದ್ಯ ಸಂಸ್ಥೆ ಅಥವಾ ಉಡುಪಿ ತಾಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಗುಡುಗು ಸಹಿತ ಮಳೆ

ಉಡುಪಿ, ನ.6: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ಗುಡುಗು ಸಹಿತ...

ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು, ನ.6: ಗೃಹಕಚೇರಿ ಕೃಷ್ಣಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ....

ಉಡುಪಿ ಶ್ರೀ ಕೃಷ್ಣ ಮಠ: ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

ಉಡುಪಿ, ನ.6: ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸವನ್ನು...
error: Content is protected !!