Saturday, November 7, 2026
Saturday, November 7, 2026

ವಿದ್ಯಾರ್ಥಿಗಳು ವಿಮರ್ಶಾತ್ಮಕ ಮನೋಭಾವ ಬೆಳೆಸಿಕೊಳ್ಳಿ: ಅಭಿಲಾಷ ಎಸ್

ವಿದ್ಯಾರ್ಥಿಗಳು ವಿಮರ್ಶಾತ್ಮಕ ಮನೋಭಾವ ಬೆಳೆಸಿಕೊಳ್ಳಿ: ಅಭಿಲಾಷ ಎಸ್

Date:

ಕುಂದಾಪುರ, ಅ.16: ಆಧುನಿಕ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಮುನ್ನಡೆಯುವುದರ ಜೊತೆಗೆ ಸಂವೇದನಾಶೀಲತೆಯನ್ನು ಬೆಳೆಸಿಕೊಳ್ಳಬೇಕು. ಆತ್ಮಾವಲೋಕನದ ಮೂಲಕ ತಮ್ಮ ಸಾಮರ್ಥ್ಯ ಹಾಗೂ ಕೌಶಲ್ಯಗಳನ್ನು ಗುರುತಿಸಿಕೊಂಡು, ಕಲೆ ಮತ್ತು ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ವಿಮರ್ಶಾತ್ಮಕ ಚಿಂತನೆಯೊಂದಿಗೆ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಭವಿಷ್ಯದ ಬದುಕು ಅರ್ಥಪೂರ್ಣವಾಗಲು ಸಾಧ್ಯ ಎಂದು ಬ್ರಹ್ಮಾವರದ ಎಸ್‌ಎಂಎಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಅಭಿಲಾಷ ಎಸ್. ಹೇಳಿದರು.

ಅವರು ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ್ದ ‘ಜೀವನ ಮೌಲ್ಯ’ ಸರಣಿ ಉಪನ್ಯಾಸ ಮಾಲಿಕೆ-3ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ವರಲಕ್ಷ್ಮಿ ಅತಿಥಿಗಳನ್ನು ಪರಿಚಯಿಸಿದರು. ಸಿಂಚನಾ ಮತ್ತು ನಿರೀಕ್ಷಾ ಪ್ರಾರ್ಥಿಸಿದರು. ಪ್ರಮಿತಾ ಸ್ವಾಗತಿಸಿದರು. ಧನ್ಯಶ್ರೀ ವಂದಿಸಿದರು. ನವ್ಯ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಗುಡುಗು ಸಹಿತ ಮಳೆ

ಉಡುಪಿ, ನ.6: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ಗುಡುಗು ಸಹಿತ...

ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು, ನ.6: ಗೃಹಕಚೇರಿ ಕೃಷ್ಣಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ....

ಉಡುಪಿ ಶ್ರೀ ಕೃಷ್ಣ ಮಠ: ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

ಉಡುಪಿ, ನ.6: ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸವನ್ನು...
error: Content is protected !!