Sunday, October 18, 2026
Sunday, October 18, 2026

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

Date:

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ ಕಾರ್ಮಿಕರುಗಳಿಗೆ ತಲುಪಿಸುವುದರೊಂದಿಗೆ ಅವರುಗಳು ಯಾವುದೇ ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ರಾಜ್ಯದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ ಶಾಹಿದ್ ತೆಕ್ಕಿಲ್ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಕಾರ್ಮಿಕ ಇಲಾಖೆಯ ಕಚೇರಿಯಲ್ಲಿ ಕಾರ್ಮಿಕ ಅಧಿಕಾರಿಗಳು ಹಾಗೂ ಜಿಲ್ಲೆಯ ಕಾರ್ಮಿಕ ಮುಖಂಡರುಗಳ ಜೊತೆ ನಡೆದ ಸಭೆಯಲ್ಲಿ ಮಾತಣಾಡುತ್ತಿದ್ದರು. ರಾಜ್ಯದಲ್ಲಿ ಸುಮಾರು 3.5 ಕೋಟಿ ವಿವಿಧ ವಲಯದ ಕಾರ್ಮಿಕರು ಇದ್ದಾರೆ. ಸರಕಾರವು ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ ಹೊಂದಿದೆ. ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವ ಯಾವುದೇ ಕೆಲಸಗಳನ್ನು ಯಾವುದೇ ಮುಲಾಜಿಲ್ಲದೇ ಮಾಡಬೇಕು. ಕಾರ್ಮಿಕರು ರಾಜ್ಯದ ಯಾವುದೇ ಮೂಲೆಯವರಾಗಿರಲಿ, ಅವರು ಮಾಡಿದ ಕೆಲಸಕ್ಕೆ ಕನಿಷ್ಠ ಕೂಲಿ ಸಿಗುತ್ತಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಇದನ್ನು ಮಾನವೀಯತೆಯ ದೃಷ್ಟಿಯಿಂದ ಮಾಡಬೇಕು ಎಂದರು.

ರಾಜ್ಯದಲ್ಲಿ ಪ್ರಸ್ತುತ ಜೀವನಶೈಲಿ ಬದಲಾವಣೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮನಗಂಡ ಸರ್ಕಾರವು 9 ವರ್ಷಗಳ ನಂತರ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆಗೆ ಕ್ರಮ ಕೈಗೊಂಡಿದ್ದು, ವಿವಿಧ ಹಂತದಲ್ಲಿ ಕನಿಷ್ಠ ವೇತನ ನಿಗದಿಪಡಿಸುವ ಪ್ರಕ್ರಿಯೆ ನಡೆದಿದೆ. ಆದರೆ ಕೆಲವರು ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ. ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಶೀಘ್ರದಲ್ಲಿ ಈ ಬಗ್ಗೆ ಸೂಕ್ತ ನಿರ್ಣಯ ಹೊರಬೀಳಲಿದೆ ಎಂದರು. ಕಾರ್ಮಿಕ ಸಂಘಟನೆಗಳು ಜಿಲ್ಲೆಯಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸಬೇಕು. ಕಾರ್ಮಿಕರುಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡು ಸರಕಾರದಿಂದ ದೊರಕುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಮಾತನಾಡಿ, ಅಸಂಘಟಿತ ಕಾರ್ಮಿಕರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ದುಡಿಯುವ ವರ್ಗದ ಕಾರ್ಮಿಕರ ಹಿತವನ್ನು ಕಾಪಾಡುವುದರೊಂದಿಗೆ ಅವರುಗಳ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಜೀವನ ಕಟ್ಟಿಕೊಳ್ಳಲು ಅನುವು ಮಾಡಿಕೊಡಬೇಕು ಎಂದ ಅವರು ಹೊರಗುತ್ತಿಗೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಕನಿಷ್ಠ ವೇತನ ದೊರೆಯುವುದರೊಂದಿಗೆ ಸಾಮಾಜಿಕ ಭದ್ರತೆಯ ಸೌಲಭ್ಯಗಳು ಸಿಗುವಂತಾಗಬೇಕು ಎಂದರು. ಕಾರ್ಮಿಕರ ಕಲ್ಯಾಣವಾದಾಗ ಸಮಾಜದ ಕಲ್ಯಾಣ ಆಗುತ್ತದೆ. ಕಾರ್ಮಿಕರ ಬಗ್ಗೆ ಆಸಕ್ತಿಯಿಂದ ಕೆಲಸ ಮಾಡಿದಾಗ ಅವರುಗಳ ಜೀವನಮೌಲ್ಯ ಸುದಾರಣೆ ಆಗುತ್ತದೆ. ಕಟ್ಟಡ ಕಾರ್ಮಿಕರು ವರ್ಷದಲ್ಲಿ 90 ದಿನಗಳ ಕಾಲ ಕೆಲಸ ನಿರ್ವಹಿಸಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿದಾಗ ಬೇರೆ ಸೌಲಭ್ಯಕ್ಕಾಗಿ ನೋಂದಣಿಯನ್ನು ರದ್ದುಗೊಳಿಸಬಾರದು ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಉಡುಪಿ ಕಾರ್ಮಿಕ ನಿರೀಕ್ಷಕರುಗಳಾದ ಸಂಜಯ್ ಹಾಗೂ ಮಲ್ಲಿಕ್ ಪ್ರಸಾದ್, ಉಡುಪಿ ಸಿಐಟಿಯು ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ, ಕಾರ್ಯದರ್ಶಿ ಚಂದ್ರಶೇಖರ್ ವಿ, ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಯುವ ಸಂಸತ್ತಿನಿಂದ ಯುವಕರಿಗೆ ಸಂವಿಧಾನ ಹಾಗೂ ಸಂಸತ್ ನ ಪರಿಚಯ: ಯಶ್ಪಾಲ್ ಸುವರ್ಣ

ಉಡುಪಿ, ಅ.17: ಯುವಕರಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ದೇಶದ ಸಂವಿಧಾನ ಹಾಗೂ ಸಂಸತ್ತಿನ...
error: Content is protected !!