Saturday, October 17, 2026
Saturday, October 17, 2026

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

Date:

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್ ಇಲಾಖೆಯಂತೆಯೇ ಗೃಹರಕ್ಷಕರು ಕೂಡ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಕರ್ತವ್ಯ ನಿಷ್ಠೆಯನ್ನು ಪರಿಗಣಿಸಿ ಜಿಲ್ಲೆಯಲ್ಲಿ 30 ಜನ ಗೃಹರಕ್ಷಕರನ್ನು ಪೊಲೀಸ್ ಇಲಾಖೆಗೆ ನಿಯೋಜಿಸುವುದಕ್ಕೆ ಅಗತ್ಯ ಪ್ರಕ್ರಿಯೆ ನಡೆಸಲು ಯೋಚಿಸಲಾಗಿದೆ ಎಂದು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು. ಜಿಲ್ಲಾ ಗೃಹರಕ್ಷಕದಳದ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಶುಕ್ರವಾರ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು.

ಉಡುಪಿ ಪೊಲೀಸ್ ಇಲಾಖೆಯಲ್ಲಿ 30 ಹುದ್ದೆಗಳು ತೆರವಾಗಲಿವೆ. ಈ ಹಿನ್ನೆಲೆಯಲ್ಲಿ ಇನ್ನೂ 30 ಜನ ಗೃಹ ರಕ್ಷಕರನ್ನು ಇಲಾಖೆಗೆ ನಿಯೋಜಿಸುವುದಕ್ಕೆ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಅವರ ನಿಯೋಜನೆಗೆ ಯೋಜಿಸಲಾಗುತ್ತಿದೆ. ಜಿಲ್ಲೆಯಲ್ಲಿ ಅಕ್ಕ ಪಡೆ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಜನರಿಂದ ಮೆಚ್ಚುಗೆ ಪಡೆದಿದೆ ಎಂದ ಅವರು ಗೃಹರಕಕ್ಷಕರು ತಮ್ಮ ಮಾನಸಿಕ ಆರೋಗ್ಯ ಹಾಗೂ ದಇಹಿಕ ಸಾಮರ್ಥ್ಯವನ್ನು ವೃದ್ದಿಸಿಕೊಳ್ಳಲು ಕ್ರೀಡೆ ಸಹಾಯ ಮಾಡುತ್ತದೆ. ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರನ್ನೂ ಅಭಿನಂದಿಸಿದ ಅವರು ಮುಂದಿನ ದಿನಗಳಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಲು ಕರೆ ನೀಡಿದರು. ಗೃಹರಕ್ಷಕದಳದ ಸಮಾದೇಷ್ಟ ಡಾ. ರೋಶನ್ ಕುಮಾರ್ ಶೆಟ್ಟಿ ಮಾತನಾಡಿ ಕ್ರೀಡಾ ಕೂಟದಿಂದ ಸ್ನೇಹ ಬಾಂಧವ್ಯ ಹೊಂದಲು ಸಾಧ್ಯ. ಒತ್ತಡದ ನಡುವೆ ಕಾರ್ಯ ನಿರ್ವಹಿಸುವ ಗೃಹ ರಕ್ಷಕರು ಚೇತೋಹಾರಿಯಾಗಿ ಕಾರ್ಯನಿರ್ವಹಿಸಲು ಕ್ರೀಡಾಕೂಟ ಸಹಕಾರಿ ಎಂದರು.

ಕ್ರೀಡಾಕೂಟದಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ಬಹುಮಾನ ವಿತರಿಸಲಾಯಿತು. ಉದ್ಯಮಿಗಳಾದ ಸಂಪತ್ ಕುಮಾರ್ ಶೆಟ್ಟಿ, ಅಜಯ್ ಪಿ. ಶೆಟ್ಟಿ, ಚಿಕ್ಕಮಗಳೂರು ಜಿಲ್ಲೆಯ ಗೃಹರಕ್ಷಕ ದಳದ ಸಮಾದೇಷ್ಟೆ ನಸೀಮ್ ತಾಜ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉಡುಪಿ ಜಿಲ್ಲೆ ಗೃಹರಕ್ಷಕ ದಳದ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ. ಸ್ವಾಗತಿಸಿದರು. ಬ್ರಹ್ಮಾವರ ಪಿಎಲ್ ಸಿ ಘಟಕ್ ಸ್ಟೀವನ್ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...

ಯುವ ಸಂಸತ್ತಿನಿಂದ ಯುವಕರಿಗೆ ಸಂವಿಧಾನ ಹಾಗೂ ಸಂಸತ್ ನ ಪರಿಚಯ: ಯಶ್ಪಾಲ್ ಸುವರ್ಣ

ಉಡುಪಿ, ಅ.17: ಯುವಕರಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ದೇಶದ ಸಂವಿಧಾನ ಹಾಗೂ ಸಂಸತ್ತಿನ...
error: Content is protected !!