Thursday, November 5, 2026
Thursday, November 5, 2026

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

Date:

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2026 ಪ್ರಯುಕ್ತ ಅಕ್ಟೋಬರ್ 21 ರಂದು ಬೃಹತ್ ಶೋಭಾಯಾತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವ ಹಿನ್ನೆಲೆ, ವಾಹನ ದಟ್ಟಣೆಯಾಗಿ ಸಂಚಾರ ದಟ್ಟಣೆ ಆಗುವ ಸಾಧ್ಯತೆ ಇದ್ದು, ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಟಿಯಿಂದ ಸದರಿ ದಿನದಂದು ಈ ಕೆಳಕಂಡಂತೆ ವಾಹನಗಳ ಸಂಚಾರಕ್ಕೆ ಮಾರ್ಗ ಬದಲಾವಣೆ ಹಾಗೂ ಸಂಚಾರ ನಿಷೇಧಕ್ಕೆ ಸಂಬಂಧಿಸಿದಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿರುತ್ತಾರೆ.
ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಅಪರಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವಾ-ಬೆಳ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸಬೇಕು.
ಉಡುಪಿ ಕಡೆಯಿಂದ ಬಜ್ಪೆ ಏರ್‌ಪೋರ್ಟ್ಗೆ ಹೋಗುವ ವಾಹನಗಳು ಕಟಪಾಡಿ-ಶಿರ್ವಾ-ಬೆಳ್ಮಣ್-ಮುಂಡ್ಕೂರು ಮಾರ್ಗವಾಗಿ ಸಂಚರಿಸಬೇಕು.
ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್ ಬೇ ಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರೆಸಬೇಕು. ಉಡುಪಿಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9 ಗಂಟೆ ನಂತರ ಉಡುಪಿಯಿಂದ ಸಂಚರಿಸಬೇಕು. ಮಂಗಳೂರು-ಉಡುಪಿ ಮಾರ್ಗವಾಗಿ ಅಪರಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಘನ ವಾಹನಗಳ ಸಂಚಾರ ನಿಷೇಧಿಸಿದೆ. ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊರಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅತಿವೇಗದಿಂದ ಬಂದ ಬಸ್ ಢಿಕ್ಕಿ- ಅದೃಷ್ಟವಶಾತ್ ಪಾರಾದ ಉಡುಪಿಯ ಸಮಾಜ ಸೇವಕ

ಉಡುಪಿ, ನ.5: ಗುರುವಾರ (ನ.5 ) ಬೆಳಿಗ್ಗೆ ಉಡುಪಿ ಕಡೆಗೆ ಸಂಚರಿಸುತ್ತಿದ್ದ...

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ನ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ...

ಉಚಿತ ಕನ್ನಡಕ ವಿತರಣೆ

ಹಿರಿಯಡಕ, ನ.5: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಶಾಸಕರಾದ...
error: Content is protected !!