Wednesday, October 21, 2026
Wednesday, October 21, 2026

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Date:

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಯವರ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ 2026 ರ ಕಾರ್ಯಕ್ರಮವನ್ನು ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಕಾರ್ಯಕ್ರಮ ಉದ್ಘಾಟಿಸಿ, ಮಾನಸಿಕ ಆರೋಗ್ಯಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿ ಡಾ. ಬಸವರಾಜ ಜಿ.ಹುಬ್ಬಳ್ಳಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಲತಾ ನಾಯಕ್, ಟೆಲಿ ಮನಸ್, ಇ.ಸಿ.ಆರ್.ಸಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಬರುವ ಇತರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...

ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ

ಉಡುಪಿ, ಅ.19: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...
error: Content is protected !!