Friday, November 13, 2026
Friday, November 13, 2026

ತೆಂಕನಿಡಿಯೂರು ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನ ವೇದಿಕೆ ಉದ್ಘಾಟನೆ

ತೆಂಕನಿಡಿಯೂರು ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನ ವೇದಿಕೆ ಉದ್ಘಾಟನೆ

Date:

ತೆಂಕನಿಡಿಯೂರು, ಅ.21: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ 2026-27 ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನ ವೇದಿಕೆ ಉದ್ಘಾಟನೆ ಅಕ್ಟೋಬರ್ 16 ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನೇತ್ರಜ್ಯೋತಿ ಶಿಕ್ಷಣ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಡಾ. ಕೃಷ್ಣಪ್ರಸಾದ್ ಕೆ ಅವರು, ತಂತ್ರಜ್ಞಾನ ಮತ್ತು ಸಾಮಾಜಿಕ ಮಾಧ್ಯಮಗಳ ಗುಲಾಮರಾಗದೆ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮತ್ತು ಏಕಾಗ್ರತೆಯಿಂದ ಅಧ್ಯಯನ ನಡೆಸಿದಲ್ಲಿ ಯಶಸ್ಸು ಸಾಧ್ಯ. ಓದುವ ಮಾಧ್ಯಮ ಯಾವುದೇ ಆಗಲಿ, ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸಿದಲ್ಲಿ ಯಶಸ್ಸು ಖಚಿತ. ವೃತ್ತಿ ಬದುಕಿನಲ್ಲಿ ಹೆತ್ತವರು, ಗುರು ಹಿರಿಯರು ಹಾಗೂ ಕಲಿತ ಶಾಲೆಯನ್ನು ಎಂದೂ ಮರೆಯದಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಾಸಕ ಯಶ್ಪಾಲ್ ಸುವರ್ಣ ಅವರು ಮಾತನಾಡುತ್ತಾ, ವಿದ್ಯಾರ್ಥಿಗಳು ಲಭ್ಯವಿರುವ ಸಂಪನ್ಮೂಲಗಳ ಸದ್ಬಳಕೆಯನ್ನು ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತರುವ ಕಾರ್ಯವನ್ನು ಮಾಡಬೇಕು ಎಂದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಉಡುಪಿ ಅಜ್ಜರಕಾಡಿನ ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಅವರು, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಅರಿತು ಶ್ರೇಷ್ಠ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ದ್ವೇಷ, ಅಸೂಯೆ ತೊಡೆದು ಹಾಕಿ ಪ್ರೀತಿಯಿಂದ ಜಗತ್ತು ಗೆಲ್ಲಬಹುದು. ಜ್ಞಾನ, ಸಚ್ಛಾರಿತ್ರ್ಯ ತುಂಬಿದಾಗ ಬಾಗುವ ಗುಣ ಬರುತ್ತದೆ. ವಿದ್ಯಾರ್ಥಿಗಳು ಅದ್ಭುತ ಶಕ್ತಿಯಾಗಬೇಕಿದೆ ಎಂದರು.

ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ. ಗಾಂವಕರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಸ್ಪಷ್ಟ ಗುರಿಯನ್ನು ಇಟ್ಟು ಮುನ್ನಡೆದರೆ ಸಾಧನೆಯ ಮಾರ್ಗ ಸುಲಭವಾಗುತ್ತದೆ ಎಂದರು. ಪ್ರಾಂಶುಪಾಲರು ವಿದ್ಯಾರ್ಥಿ ಕ್ಷೇಮಪಾಲನ ವೇದಿಕೆ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಕೃಷ್ಣ ಸಾಸ್ತಾನ, ಡಾ. ದತ್ತ ಕುಮಾರ್, ಶೈಕ್ಷಣಿಕ ಸಲಹೆಗಾರರಾದ ಡಾ. ಶ್ರೀಧರ್ ಭಟ್, ಹಮೀದಾ ಬಾನು, ವಿದ್ಯಾರ್ಥಿ ಕ್ಷೇಮಪಾಲನ ವೇದಿಕೆ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಯೋಗಿತಾ ಮತ್ತು ಬಳಗ ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಪದವಿ ವಿಭಾಗದ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಘು ನಾಯ್ಕ್ ಸ್ವಾಗತಿಸಿ,
ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶ್ರೀದೇವಿ ಕೆ ವಂದಿಸಿದರು. ಕನ್ನಡ ವಿಭಾಗ ಮುಖ್ಯಸ್ಥರಾದ ಮಾರುತಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು: ಆಹಾರ ಮೇಳದಲ್ಲಿ ಭರ್ಜರಿ ವಹಿವಾಟು

ಉಡುಪಿ, ನ.13: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿಯ ವಾಣಿಜ್ಯ ಸಂಘದ...

ಕಟಪಾಡಿ: 1 ಕೋಟಿ 10 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಟಪಾಡಿ, ನ.13: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಶ್ರೀ ಕ್ಷೇತ್ರ ಶಂಕರಪುರ: ಬೀದಿ ಶ್ವಾನ ಸಂರಕ್ಷಣಾ ದಿನಾಚರಣೆ

ಕಟಪಾಡಿ, ನ.13: ಉಡುಪಿ ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ...

ಶ್ರೀ ಕೃಷ್ಣ ಮಠಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ

ಉಡುಪಿ, ನ.13: ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ...
error: Content is protected !!