Saturday, October 24, 2026
Saturday, October 24, 2026

ಅ. 25: ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ

ಅ. 25: ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ

Date:

ಉಡುಪಿ, ಅ.22: ಅಮ್ಮೆಂಬಳ ಶಂಕರನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಮಂಗಳೂರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಜೀವಮಾನ ಸಾಧನೆಗಾಗಿ ನೀಡಲಾಗುವ ಪ್ರತಿಷ್ಠಿತ ‘ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ ಅ.25 ಭಾನುವಾರ ಸಂಜೆ 4.30ಕ್ಕೆ ಉಡುಪಿಯ ಅಂಬಲಪಾಡಿಯ ಶ್ಯಾಮಿಲಿ ಸಭಾಂಗಣದಲ್ಲಿ ಜರುಗಲಿದೆ.

2026ನೇ ಸಾಲಿನ ಪ್ರಶಸ್ತಿಯನ್ನು ಮೂವರು ಹಿರಿಯ ಸಾಧಕರು ಪಡೆಯಲಿದ್ದಾರೆ. ಕನ್ನಡ, ಇಂಗ್ಲಿಷ್ ಮತ್ತು ಜರ್ಮನ್ ಭಾಷೆಗಳ ನಡುವೆ ಮಹಾಸೇತುವಾಗಿ ಕಾರ್ಯನಿರ್ವಹಿಸಿ, ಹಳಗನ್ನಡ ಕಾವ್ಯ, ಜನಪದ ಪುರಾಣ ಹಾಗೂ ಕನ್ನಡದ ಶ್ರೇಷ್ಠ ಕಾದಂಬರಿಗಳನ್ನು ಇಂಗ್ಲಿಷ್‌ಗೆ ಅನುವಾದಿಸಿದ ಡಾ. ಎನ್.ಟಿ. ಭಟ್, ನಾಲ್ಕು ದಶಕಗಳ ಕಾಲ ಸಂಸ್ಕೃತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ವಿದ್ವಾಂಸ ಡಾ. ಎನ್. ಲಕ್ಷ್ಮೀನಾರಾಯಣ ಭಟ್ಟ, ಹಾಗೂ ಪ್ರಮುಖ ವಿಮರ್ಶಕ, ಸಂಶೋಧಕ, ಚಿಂತಕ ಡಾ. ಅಜಕ್ಕಳ ಗಿರೀಶ ಭಟ್ಟ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಯು ಗೌರವಧನ ರೂ. 10,000 ದೊಂದಿಗೆ ಪ್ರಶಸ್ತಿ ಪತ್ರ ಮತ್ತು ಫಲಕ ಒಳಗೊಂಡಿರುತ್ತದೆ.

ಪ್ರೊ. ಎ.ವಿ. ನಾವಡ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಮುರಲಿ ಕಡೆಕಾರು ಸಮಾರಂಭಕ್ಕೆ ಚಾಲನೆ ನೀಡಲಿದ್ದಾರೆ. ಎನ್.ಐ.ಟಿ.ಕೆ. ಸುರತ್ಕಲ್‌ನ ಮಾಜಿ ನಿರ್ದೇಶಕ ಡಾ. ಎಚ್. ಸುಧಾಕರ ನಾಯಕ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಎಂ.ಜಿ.ಎಂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ. ಎಂ.ಎಲ್. ಸಾಮಗ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಉಡುಪಿ ವಿಶ್ವನಾಥ ಶೆಣೈ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಉಡುಪಿ ಮತ್ತು ಸುಹಾಸಂ, ಉಡುಪಿ ಸಂಸ್ಥೆಗಳು ಸಹಕರಿಸಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಪತ್ರಿಕಾ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಪೆರ್ಡೂರು, ಅ.23: ಕಾಪು ವಿಧಾನಸಭಾ ಕ್ಷೇತ್ರದ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ...

ದಾರ್ಶನಿಕರ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶ, ಜೀವನ ತತ್ವಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ಅ.23: ನಾಡಿನ ಸಾಂಸ್ಕೃತಿಕ, ಸಾಮಾಜಿಕ ಮತ್ತು ಧಾರ್ಮಿಕ ಬೆಳವಣಿಗೆಗೆ ಶ್ರಮಿಸಿದ...

ಅ.24: ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಉಡುಪಿ, ಅ.23: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ...
error: Content is protected !!