ಕುಂದಾಪುರ, ಅ.23: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಗಣದಲ್ಲಿರುವ ಸರಸ್ವತಿ ದೇವರ ಮೂರ್ತಿಗೆ ನವರಾತ್ರಿಯ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾಲೇಜಿನ ಗ್ರಂಥಾಲಯದಲ್ಲಿ ಶಾರದಾ ಪೂಜಾ ಕಾರ್ಯಕ್ರಮವನ್ನು ಭಜನಾ ಕೀರ್ತನೆಯೊಂದಿಗೆ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕರಾದ ಗಿರಿರಾಜ್ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಮುಖ್ಯ ಗ್ರಂಥಪಾಲಕರಾದ ಮಹೇಶ್ ನಾಯ್ಕ್, ಗ್ರಂಥಾಲಯ ಸಹಾಯಕಿ ಪ್ರತೀಕಾ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಿ. ಬಿ. ಹೆಗ್ಡೆ ಕಾಲೇಜು: ಸರಸ್ವತಿ ಹಾಗೂ ಶಾರದಾ ಪೂಜೆ
ಬಿ. ಬಿ. ಹೆಗ್ಡೆ ಕಾಲೇಜು: ಸರಸ್ವತಿ ಹಾಗೂ ಶಾರದಾ ಪೂಜೆ
Date:




By
ForthFocus™