ಉಡುಪಿ, ಅ.24: ಬಹಳ ದಿನಗಳಿಂದ ನೆನೆಗುದಿಗೆಗೆ ಬಿದ್ದಿರುವ ಶಿವಪುರ ಪಂಚಾಯತ್ ಕಡೆಯಿಂದ ಸುಮಾರು 1 ಕೀ ಮೀ ಸೇತುವೆ ಸಹಿತ ರಸ್ತೆಯನ್ನು ಡಿಸೆಂಬರ್ ಅಂತ್ಯದೊಳಗೆ ಮುಗಿಸಬೇಕೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಡಿಗಾರ ವ್ಯಾಪ್ತಿಯ ಸುಮಾರು 1.3 ಕೀ ಮೀ ಅರಣ್ಯ ತೆರವು ಕಾರ್ಯಾಚರಣೆ ಪರಿಶೀಲಿಸಿ, ಈಗಾಗಲೇ ಅರಣ್ಯ ಇಲಾಖೆ ಅನುಮತಿ ನೀಡಿರುವುದರಿಂದ ಕಾಮಗಾರಿಗೆ ವೇಗ ಕೊಡಲು ಅಧಿಕಾರಿಗಳಿಗೆ ಸಂಸದರು ಸೂಚಿಸಿದರು. ಆತ್ರಾಡಿ ಪರಿಸರದ ಸಾರ್ವಜನಿಕರಿಂದ ಮನವಿ ಸ್ವೀಕರಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಶೇಷ ತಿರುವು ನೀಡಲು ಮನವಿ ಮಾಡಿದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಾದ ಮಂಜನ ಗೌಡ, ನವೀನ್, ಶಶಿಧರ್, ಶಿವಪುರ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ರಮೇಶ್ ಪೂಜಾರಿ, ರತ್ನಾಕರ ಶೆಟ್ಟಿ ಆತ್ರಾಡಿ, ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.




By
ForthFocus™