Sunday, November 15, 2026
Sunday, November 15, 2026

ವಿವಿಧ ಜನಪರ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ವಿವಿಧ ಜನಪರ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಅ.24: ಉಡುಪಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಉಚ್ಚಿಲ ಭೇಟಿ ಸಂದರ್ಭದಲ್ಲಿ ಭೇಟಿ ಮಾಡಿ ಪ್ರಮುಖ ಬೇಡಿಕೆಗಳ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ವಿಶೇಷ ಚೇತನ ಮಕ್ಕಳ ಶಿಕ್ಷಕರು, ದೇವಸ್ಥಾನಗಳ ಅರ್ಚಕರು ಮತ್ತು ಸಿಬ್ಬಂದಿ ಹಾಗೂ ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಕಲ್ಪಿಸಬೇಕು. ಅವರ ಸೇವೆಗೆ ತಕ್ಕಂತೆ ಸಮರ್ಪಕ ಸೌಲಭ್ಯಗಳನ್ನು ಒದಗಿಸಿ, ಆರ್ಥಿಕ ಸ್ಥಿರತೆ ಮತ್ತು ಉದ್ಯೋಗ ಭದ್ರತೆ ಖಚಿತಪಡಿಸಬೇಕು ಎಂದು ಮನವಿ ಮಾಡಿದರು.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ಕಾಲುಸಂಕ, ತಡೆಗೋಡೆ ಹಾಗೂ ಬೀದಿದೀಪ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ರೂ. 50 ಕೋಟಿ ವಿಶೇಷ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಬೇಕು.

ನಾಡದೋಣಿ ಮೀನುಗಾರರು ಸೀಮೆಎಣ್ಣೆ ಬೆಲೆ ಹಾಗೂ ನಿರ್ವಹಣಾ ವೆಚ್ಚದ ಹೆಚ್ಚಳದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಡದೋಣಿಗಳಿಗೆ ನೀಡುವ ಸೀಮೆಎಣ್ಣೆ ಸಬ್ಸಿಡಿಯನ್ನು ಹೆಚ್ಚಿಸಿ, ಸಾಂಪ್ರದಾಯಿಕ ಮೀನುಗಾರರ ಜೀವನೋಪಾಯಕ್ಕೆ ನೆರವಾಗಬೇಕು ಎಂದು ಆಗ್ರಹಿಸಿದ್ದಾರೆ.

ಮಲ್ಪೆ ಮೀನುಗಾರಿಕಾ ಬಂದರಿನ ಸಮಗ್ರ ಅಭಿವೃದ್ಧಿಗಾಗಿ ನೂತನ ಜಟ್ಟಿ, ಔಟರ್ ಹಾರ್ಬರ್ ನಿರ್ಮಾಣ, ಸಮರ್ಪಕ ಪಾರ್ಕಿಂಗ್ ಹಾಗೂ ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುವಂತೆ ಕೋರಿದ್ದಾರೆ.

ಜಿಲ್ಲೆಯಲ್ಲಿ ಜನ ಸಾಮಾನ್ಯರಿಗೆ ಕಟ್ಟಡ ನಿರ್ಮಾಣ ಸಾಮಗ್ರಿ ಲಭ್ಯತೆ ಹಿನ್ನೆಲೆಯಲ್ಲಿ ಕ್ವಾರಿ, ಸ್ಟೋನ್ ಕ್ರಷರ್ ಹಾಗೂ ಎಂ-ಸ್ಯಾಂಡ್ ಉದ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಬೇಕು. ನಿರ್ಮಾಣ ಸಾಮಗ್ರಿಗಳ ಪೂರೈಕೆಯಲ್ಲಿನ ಅಡಚಣೆಗಳನ್ನು ನಿವಾರಿಸಿ, ಸಂಬಂಧಪಟ್ಟ ಇಲಾಖೆಗಳ ಸಮನ್ವಯದೊಂದಿಗೆ ಕಾನೂನುಬದ್ಧ ಹಾಗೂ ಕಾರ್ಯಸಾಧ್ಯ ಪರಿಹಾರಗಳನ್ನು ರೂಪಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೆಟ್ ಬಾಲ್ ಪಂದ್ಯಾಟದಲ್ಲಿ ಸರಸ್ವತಿ ವಿದ್ಯಾಲಯಕ್ಕೆ ಅವಳಿ ಪ್ರಶಸ್ತಿ

ಉಡುಪಿ, ನ.14: ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಮೂಕಾಂಬಿಕಾ...

ಶಿಕ್ಷಣ-ಕ್ರೀಡೆ-ಸಾಂಸ್ಕೃತಿಕ-ಶಿಸ್ತು ಒಳಗೊಂಡ ಪರಿಪೂರ್ಣ ಸಂಸ್ಥೆ ಜ್ಞಾನಸುಧಾ: ಸೀತಾನದಿ ವಿಠಲ ಶೆಟ್ಟಿ

ಗಣಿತನಗರ, ನ.14: ವ್ಯಕ್ತಿ ಸದೃಢನಾಗಿರಲು ಕ್ರೀಡೆಯು ಬಹುಮುಖ್ಯ ಪಾತ್ರವಹಿಸುತ್ತದೆ. ದೈಹಿಕ ಶಕ್ತಿಯೇ...

ರಾಜ್ಯದ ಅಭಿವೃದ್ಧಿಗೆ ತುಳುನಾಡಿನ ಕೊಡುಗೆ ಮಹತ್ತರ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ನ.14: ಜನರನ್ನು ತಲುಪಲು ಆ ಪ್ರದೇಶದ ಭಾಷೆಯ ಕಲಿಕೆ ಅತೀ...

ಪಶು ಔಷಧಿ ವಿಕ್ರಯ ಕೇಂದ್ರಗಳ ಪ್ರಾರಂಭಕ್ಕೆ ಅರ್ಜಿ ಆಹ್ವಾನ

ಉಡುಪಿ, ನ.14: ಕೇಂದ್ರ ಸರ್ಕಾರದ ಆಂಊಆ ಇಲಾಖೆಯ ವತಿಯಿಂದ ಪಶುಪಾಲಕರಿಗೆ ಕೈಗೆಟುಕುವ...
error: Content is protected !!