Sunday, October 25, 2026
Sunday, October 25, 2026

ನ.1: ಗುಜ್ಜಾಡಿ ನಾಯಕವಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ನ.1: ಗುಜ್ಜಾಡಿ ನಾಯಕವಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Date:

ಗುಜ್ಜಾಡಿ, ಅ.25: ಕರ್ನಾಟಕ ಸರಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಆಯುಷ್ ಇಲಾಖೆ ಉಡುಪಿ, ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು, ಗ್ರಾಮ ಪಂಚಾಯತ್ ಗುಜ್ಜಾಡಿ, ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ (ರಿ.) ನಾಯಕವಾಡಿ – ಗುಜ್ಜಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ದೃಷ್ಟಿ (ಪ್ರ)ದಾನ ಯೋಜನೆ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಶಿರೂರು ಮುದ್ದು ಮನೆ, ಬಯೋಲಿನ್ ಲ್ಯಾಬೋರೇಟರಿ ಲೈಫ್ ಕೇರ್ ಡಯಾಗ್ನೋಸ್ಟಿಕ್ ಸೆಂಟರ್ ಕುಂದಾಪುರ ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುಜ್ಜಾಡಿ, ಕಟ್ಟಡ ಮತ್ತು ಇತರ ಕಾರ್ಮಿಕರ ಸಂಘ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 1 2026 ರ ಭಾನುವಾರದಂದು ಉಚಿತ ಆಯುಷ್ ಆರೋಗ್ಯ ತಪಾಸಣೆ ಮತ್ತು ಔಷಧಿ ವಿತರಣೆ ಹಾಗೂ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರವು ನಾಯಕವಾಡಿ ಗುಜ್ಜಾಡಿಯ ಶ್ರೀರಾಮ ಭಗವಾನ್ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಬೆಳಗ್ಗೆ 9:00 ರಿಂದ ಮಧ್ಯಾಹ್ನ ಒಂದು ಗಂಟೆಯ ತನಕ ನಡೆಯಲಿದೆ.

ಈ ಶಿಬಿರದಲ್ಲಿ ತಜ್ಞ ಆಯುರ್ವೇದ ವೈದ್ಯರಿಂದ ಆಯುರ್ವೇದ ಪದ್ಧತಿಯಲ್ಲಿ ಚಿಕಿತ್ಸೆ ನೀಡಲಾಗುವುದು. ಅಸ್ತಮಾ ಗ್ಯಾಸ್ಟ್ರಿಕ್ ವಾತಾವ್ಯಾದಿ ಮತ್ತು ಸ್ತ್ರೀ ಸಂಬಂಧಿ ಕಾಯಿಲೆಗಳು ಹಾಗೂ ಬೇರೆ ಇನ್ನಿತರ ಖಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುವುದು. ಹಾಗೆಯೇ ಕಣ್ಣಿನ ತಪಾಸಣೆ ನಡೆಸಿ ಪೊರೆ ರೋಗಕ್ಕೆ ಚಿಕಿತ್ಸೆ ಅಗತ್ಯವಿರುವವರಿಗೆ ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ ವತಿಯಿಂದ ತಜ್ಞ ವೈದ್ಯರ ತಂಡದೊಂದಿಗೆ ಉಚಿತವಾಗಿ ಹೊಲಿಗೆ ರಹಿತ ಅಂತರ್ ಕಣ್ಣಿನ ಮಸೂರ ಅಳವಡಿಸಲಾಗುವುದು. ಬಯೋಲಿನ್ ಕುಂದಾಪುರ ಇವರಿಂದ ಶಿಬಿರದಲ್ಲಿ ರಕ್ತ ತಪಾಸಣೆ ಥೈರಾಯ್ಡ್ ಮತ್ತು ಶುಗರ್ ತಪಾಸಣೆ ನಡೆಸಲಾಗುವುದು ಸಾರ್ವಜನಿಕರು ಈ ಶಿಬಿರದಲ್ಲಿ ಪಾಲ್ಗೊಂಡು ಇದರ ಸದುಪಯೋಗಪಡಿಸಿಕೊಳ್ಳಬೇಕಾಗಿ ಸಂಘಟಕರು ವಿನಂತಿಸಿಕೊಂಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾದರೆ ಸೂಕ್ತ ಕ್ರಮ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು, ಅ.25: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ...

ನ.1: ಕಾಪು ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾಪು, ಅ.25: ಕಾಪು ಪರಿಸರದ ಜನತೆಗೆ ಆರೋಗ್ಯ ಸೇವೆ ಸಲ್ಲಿಸುತ್ತಿರುವ ಶ್ರೀ...

ಭೂತಾನ್‌ನ ಮೊಂಗಾರ್ ಜಿಲ್ಲೆಯಲ್ಲಿ ಭಾರತದ ಬೆಂಬಲದೊಂದಿಗೆ ಕೈಗೊಂಡ 15 ಸಮುದಾಯ ಯೋಜನೆಗಳ ಉದ್ಘಾಟನೆ

ನವದೆಹಲಿ, ಅ.24: ಭೂತಾನ್‌ನ ಪೂರ್ವ ಭಾಗದಲ್ಲಿರುವ ಮೊಂಗಾರ್ ಜಿಲ್ಲೆಯಲ್ಲಿ, ಭಾರತ ಸರ್ಕಾರದ...
error: Content is protected !!