Monday, October 26, 2026
Monday, October 26, 2026

ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ

ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ

Date:

ಬಸ್ರೂರು, ಅ.26: ಬಸ್ರೂರು ಶ್ರೀ ಶಾರದಾ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ ‘ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ’ ಕಾರ್ಯಕ್ರಮ ನಡೆಯಿತು. ಬಾರಕೂರಿನ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ಯ ಉದ್ಘಾಟನೆ ನೆರವೇರಿಸಿ ವಿದ್ಯಾರ್ಥಿಗಳಿಗೆ ದೈನಂದಿನ ಜೀವನದಲ್ಲಿ ಇಂಗ್ಲೀಷ್ ಭಾಷೆಯ ಮಹತ್ವ, ಸಂವಹನ ಕೌಶಲಗಳ ಅಭಿವೃದ್ಧಿ ಹಾಗೂ ಇಂಗ್ಲೀಷ್ ಮಾತನಾಡುವಾಗ ಆತ್ಮವಿಶ್ವಾಸ ಬೆಳೆಸಿಕೊಳ್ಳುವ ವಿಧಾನಗಳ ಕುರಿತು ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ಇಂಗ್ಲೀಷ್ ಭಾಷೆಯನ್ನು ಕಲಿಯುವಾಗ ಹಿಂಜರಿಕೆಯನ್ನು ಬಿಟ್ಟು ನಿರಂತರವಾಗಿ ಮಾತನಾಡುವ ಅಭ್ಯಾಸ ಮಾಡಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ಅವರು, ಇಂಗ್ಲೀಷ್ ಭಾಷೆಯ ಜ್ಞಾನವು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೃತ್ತಿ ಜೀವನದ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದರು. ಉಪನ್ಯಾಸಕಿ ಅನ್ನಪೂರ್ಣ ಸ್ವಾಗತಿಸಿದರು. ವಿದ್ಯಾರ್ಥಿನಿ ಭೂಮಿಕಾ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರು ಕುಮಾರ ಪಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ತೈಲ ಬೆಲೆ: ಗರಿಷ್ಠ ಏರಿಕೆ ನಂತರ ಸುಮಾರು 2% ರಷ್ಟು ಕುಸಿತ

ನವದೆಹಲಿ, ಅ.26: ಸುಮಾರು ಆರು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದ ನಂತರ...

ಬ್ರೆಜಿಲ್‌ನಲ್ಲಿ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬಂದ ಲುಲಾ; ಲ್ಯಾಟಿನ್ ಅಮೆರಿಕದಲ್ಲಿ ಟ್ರಂಪ್ ಪ್ರಭಾವಕ್ಕೆ ಹಿನ್ನಡೆ

ಯು.ಬಿ.ಎನ್.ಡಿ., ಅ.26: ಭಾನುವಾರ ನಡೆದ ಬ್ರೆಜಿಲ್‌ನ ನಿರ್ಣಾಯಕ ಮತದಾನದಲ್ಲಿ ಸೆನೆಟರ್ ಫ್ಲಾವಿಯೊ...

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...

ಫ್ರೆಂಚ್ ಓಪನ್: ಪಿ.ವಿ. ಸಿಂಧು ರನ್ನರ್-ಅಪ್

ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ, ಭಾರತದ ಎರಡು...
error: Content is protected !!