Monday, October 26, 2026
Monday, October 26, 2026

ಬಿ. ಬಿ. ಹೆಗ್ಡೆ ಕಾಲೇಜು: ಮಹರ್ಷಿ ವಾಲ್ಮೀಕಿ ಜಯಂತಿ

ಬಿ. ಬಿ. ಹೆಗ್ಡೆ ಕಾಲೇಜು: ಮಹರ್ಷಿ ವಾಲ್ಮೀಕಿ ಜಯಂತಿ

Date:

ಕುಂದಾಪುರ, ಅ.26: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಅಕ್ಟೋಬರ್ 26ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಮಾತನಾಡಿ, ವಾಲ್ಮೀಕಿ ಚಿಂತಕ, ಚರಿತ್ರೆಗಾರ, ಸಮಾಜ ಸುಧಾರಕ, ಶಿಕ್ಷಣ ತಜ್ಞ, ರಾಜನೀತಿಜ್ಞ, ಪರಿಸರ ಪ್ರೇಮಿ, ವಿಶ್ವಮಾನವ ಪ್ರಜ್ಞೆಯನ್ನು ಜಗತ್ತಿಗೆ ಸಾರಿದ ದಾರ್ಶನಿಕ ಕವಿ. ವಾಲ್ಮೀಕಿ ವಿರಚಿತ ರಾಮಾಯಣದಲ್ಲಿ ಜನ ಸಮುದಾಯದ ಅನೇಕ ಸಮಸ್ಯೆಗಳು, ಸಂಕಟಗಳು ಸವಾಲುಗಳಿಗೆ ಉತ್ತರ ಸಿಗುತ್ತದೆ. ರಾಜ ಧರ್ಮ, ಯುಗ ಧರ್ಮ, ಕುಲ ಧರ್ಮಗಳ ಸಂಬಂಧವನ್ನು ಈ ಕೃತಿ ಗಟ್ಟಿಗೊಳಿಸಿದೆ. ಮಾನವೀಯ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಸೇರಿದಂತೆ ಉತ್ತಮ ಸಮಾಜ ನಿರ್ಮಾಣದ ಮಹತ್ವದ ಸಂಗತಿಗಳನ್ನು ರಾಮಾಯಣ ಮಹಾಕಾವ್ಯದಿಂದ ಕಲಿಯಬಹುದು. ರಾಮಾಯಣವು ಪ್ರಾಚೀನ ಭಾರತೀಯರ ಜೀವನ ಚರಿತ್ರೆಯನ್ನು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕರಾದ ರೇಷ್ಮಾ ಶೆಟ್ಟಿ ಸ್ವಾಗತಿಸಿದರು, ಕನ್ನಡ ಸಹಾಯಕ ಪ್ರಾಧ್ಯಾಪಕರಾದ ರಶ್ಮಿತಾ ಶೆಟ್ಟಿ, ಪ್ರವೀಣಾ ಎಮ್. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಆದಿತ್ಯ ಪ್ರಾರ್ಥಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗುರ್ಮೆ ಫೌಂಡೇಶನ್: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ

ಕಾಪು, ಅ.26: ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆಯಲ್ಲಿ 25 ವರ್ಷ...

ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಿಎಂ ಸಭೆ

ಬೆಳಗಾವಿ, ಅ.26: ಬೆಳಗಾವಿಯ ಸುವರ್ಣಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮುಖ್ಯಮಂತ್ರಿ ಡಿ.ಕೆ....

ಬಂಕೇರಕಟ್ಟ ನೂತನ ಸೇತುವೆ ನಿರ್ಮಾಣದ ಕನಸು ಶೀಘ್ರ ನನಸಾಗಲಿದೆ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ, ಅ.26: ಕಲ್ಮಾಡಿ-ಕಿದಿಯೂರು ಮುಖ್ಯ ರಸ್ತೆಯಲ್ಲಿ ಬಹು ವರ್ಷಗಳ ಬೇಡಿಕೆಯಾಗಿದ್ದ ಬಂಕೇರಕಟ್ಟ...
error: Content is protected !!