Saturday, October 31, 2026
Saturday, October 31, 2026

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಡಿ ವಿಲೀನಕ್ಕೆ ಚರ್ಚೆ-ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್ ಭೇಟಿಯಾದ ಸಂಸದ ಕೋಟ ಶ್ರೀನಿವಾಸ ಪೂಜಾರಿ

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಡಿ ವಿಲೀನಕ್ಕೆ ಚರ್ಚೆ-ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್ ಭೇಟಿಯಾದ ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

ಉಡುಪಿ, ಅ.30: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್ ರವರನ್ನು ಮುಂಬೈಯ ಮಂತ್ರಾಲಯದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ಮಾಡಿ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಬೇಕಾದ ಅನಿವಾರ್ಯತೆ ವಿವರಿಸಿದರು. ಮಾಜಿ ರಕ್ಷಣಾ ಸಚಿವರಾದ ದಿ.ಜಾರ್ಜ್ ಫೆರ್ನಾಂಡಿಸ್ ರವರ ಮೂಲಕ ಕರಾವಳಿ ಪ್ರಯಾಣಿಕರ ಜೀವನಾಡಿಯಾಗಿ ರೂಪುಗೊಂಡ ಕೊಂಕಣ ರೈಲ್ವೆ ಆರ್ಥಿಕ ಮುಗ್ಗಟ್ಟಿನ ಸಂಕಷ್ಟದಲ್ಲಿದೆ. ಸುಮಾರು 750 ಕಿ.ಮೀ ಉದ್ದದ ಕೊಂಕಣ ರೈಲ್ವೆಯ ಮಾರ್ಗವನ್ನು ಅಭಿವೃದ್ಧಿಪಡಿಸಲು ಹಾಗೂ ಭವಿಷ್ಯದ ಸಂಚಾರ ಬೆಳವಣಿಗೆಯ ಸಾಮರ್ಥ್ಯ ಹೆಚ್ಚಿಸಲು ಇಡೀ ಮಾರ್ಗವನ್ನು ದ್ವಿಗುಣಗೊಳಿಸುವ ಅನಿವಾರ್ಯವಾಗಿದೆ. ಒಂದು ಅಂದಾಜಿನ ಪ್ರಕಾರ ಮಾರ್ಗದ ಹಳಿಗಳನ್ನು ದ್ವಿಗುಣಗೊಳಿಸುವುದು ಮತ್ತು ತುಂಬಾ ಅವ್ಯವಸ್ಥೆಯಲ್ಲಿರುವ ರೈಲ್ವೆ ನಿಲ್ದಾಣಗಳನ್ನು ಉತ್ತಮವಾಗಿ ನಿರ್ಮಾಣ ಮಾಡಲು 40,000 ಕೋಟಿ ರೂಪಾಯಿಗಳ ಅಗತ್ಯವಿದೆ, ಇಷ್ಟು ಹಣವನ್ನು ಭರಿಸಲು ಕೊಂಕಣ ರೈಲ್ವೆಯ ಆರ್ಥಿಕ ಸ್ಥಿತಿ ಸಹಕಾರಿಯಾಗಿಲ್ಲ. ಕೊಂಕಣ ರೈಲ್ವೆ ಹಾದುಹೋಗುವ ರಾಜ್ಯ ಸರಕಾರಗಳು ತಮ್ಮ ಪಾಲಿನ ಶೇರನ್ನು ಬಿಟ್ಟುಕೊಟ್ಟರೆ ವಿಲೀನಗೊಳಿಸಬಹುದು ಎಂದು ಕೇಂದ್ರ ಸಚಿವರು ಲೋಕಸಭೆಯಲ್ಲಿ ಉಲ್ಲೇಖಿಸಿದ್ದನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರವರ ಗಮನಕ್ಕೆ ತರಲಾಯಿತು.

ಈ ಬಗ್ಗೆ ಗೋವಾ ಮತ್ತು ಕೇರಳ ಸರಕಾರಗಳು ವಿಲೀನಕ್ಕೆ ಸಹಮತ ವ್ಯಕ್ತಪಡಿಸಿದ್ದು, ಕರ್ನಾಟಕ ಮುಖ್ಯಮಂತ್ರಿಳಾದ ಡಿ.ಕೆ ಶಿವಕುಮಾರ್ ರೈಲ್ವೆ ಅಭಿವೃದ್ಧಿ ದೃಷ್ಟಿಯಿಂದ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಮಹಾರಾಷ್ಟ್ರ ಸರಕಾರವೂ ವಿಲೀನಕ್ಕೆ ಸಹಮತ ವ್ಯಕ್ತಪಡಿಸಿದರೆ ಮುಂದಿನ ದಿನಗಳಲ್ಲಿ ಕೊಂಕಣ ಮಾರ್ಗವು ದ್ವಿಪಥವಾಗುವುದಲ್ಲದೆ ಇತರ ಅಭಿವೃದ್ಧಿಗಾಗಿ ಕರಾವಳಿ ರಾಜ್ಯಗಳ ಜನಪ್ರತಿನಿಧಿಗಳು ಕೇಂದ್ರವನ್ನು ಮನವಿ ಮಾಡಬಹುದಾಗಿದೆ ಎಂದು ವಿವರಿಸಲಾಯಿತು.

ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮನವಿಗೆ ಸ್ಪಂದಿಸಿ, ಇದೊಂದು ಬಹು ಮುಖ್ಯ ವಿಚಾರವಾಗಿದ್ದು, ಕೊಂಕಣ ರೈಲ್ವೆ ಮಾರ್ಗದ ಪ್ರಯಾಣಿಕರ ಹಿತದೃಷ್ಟಿಯಿಂದ ಸಹಮತದ ಬಗ್ಗೆ ಕೂಡಲೇ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು. ಮಹಾರಾಷ್ಟ್ರದ ಚಂದಗಡ್ ಶಾಸಕ ಶಿವಾಜಿ ಪಾಟೀಲ್, ನ್ಯೂಮುಂಬೈ ಮಹಾನಗರ ಪಾಲಿಕೆ ಸದಸ್ಯ ಸಂತೋಷ ಶೆಟ್ಟಿ, ಕುಂದಾಪುರ ರೈಲ್ವೆ ಬಳಕೆದಾರರ ಸಂಘದ ಗೌತಮ್ ಶೆಟ್ಟಿ, ಮತ್ತು ಸುನಿಲ್ ಪೂಜಾರಿ ಉಪಸ್ಥಿತರಿದ್ದರು.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂಬಾಗಿಲು ಜಂಕ್ಷನ್ ನಲ್ಲಿ ಯಾವುದೇ ಅಪಘಾತಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.31: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್‌ಗಳನ್ನು ಸಂಗ್ರಹ ಮಾಡಲಾಗುತ್ತದೆ....

ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಅ.30: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ...
error: Content is protected !!