Saturday, October 31, 2026
Saturday, October 31, 2026

ಪಡುಬಿದ್ರಿ: ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಪಡುಬಿದ್ರಿ: ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ

Date:

ಕಾಪು, ಅ.೩೦: ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 80 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಅ.29ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಟ್ಟೆ ಸೇತುವೆ ಬಳಿಯ ಅಡ್ಡ ರಸ್ತೆ ಅಭಿವೃದ್ಧಿ – 20 ಲಕ್ಷ, 4ನೇ ವಾರ್ಡಿನ ಜಾರಂದಾಯ ಸ್ಥಾನದ ದ್ವಾರದ ಮುಂದುವರಿದ ರಸ್ತೆ ಅಭಿವೃದ್ಧಿ – 20 ಲಕ್ಷ, ಪಾದೆಬೆಟ್ಟು ಪಡುಬಿದ್ರಿ ಪಂಚಾಯತ್ ದೇವಸ ರಸ್ತೆ ಅಭಿವೃದ್ಧಿ – 20 ಲಕ್ಷ, 7ನೇ ವಾರ್ಡಿನ ಅಬ್ಬೇಡಿ ರತ್ನ ನರ್ಸರಿಯಿಂದ ಕೋಡ್ದಬ್ಬು ದೈವಸ್ಥಾನ ಹೋಗುವ ರಸ್ತೆ ಅಭಿವೃದ್ಧಿ ಹಾಗೂ 7ನೇ ವಾರ್ಡಿನ ನಡು ಮೂಡು ಗುಂಡಾಡಿ ರಸ್ತೆ ಅಭಿವೃದ್ಧಿ – 20 ಲಕ್ಷ ಸೇರಿದಂತೆ ಒಟ್ಟು 80 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್, ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶಶಿಕಲಾ, ಮಾಜಿ ಉಪಾಧ್ಯಕ್ಷರಾದ ಹೇಮಚಂದ್ರ, ಮಾಜಿ ಸದಸ್ಯರಾದ ಶೋಭಾ, ಗೀತಾ, ಸಂದೇಶ್, ರವಿ ಶೆಟ್ಟಿ, ಅಶೋಕ್ ಪೂಜಾರಿ, ಸುಜಾತಾ ಆಚಾರ್ಯ, ಹರೀಶ್ ಶೆಟ್ಟಿ, ಮಯ್ಯಾದಿ, ನೂರ್ಜಾನ್, ಶಕ್ತಿ ಕೇಂದ್ರ ಪ್ರಮುಖ್ ಸಾಧನ, ಸ್ಥಳೀಯ ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಿಥುನ್ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂಬಾಗಿಲು ಜಂಕ್ಷನ್ ನಲ್ಲಿ ಯಾವುದೇ ಅಪಘಾತಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.31: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್‌ಗಳನ್ನು ಸಂಗ್ರಹ ಮಾಡಲಾಗುತ್ತದೆ....

ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಅ.30: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ...
error: Content is protected !!