Saturday, October 31, 2026
Saturday, October 31, 2026

ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ನೂತನ ಪ್ರಾಂಶುಪಾಲರಾಗಿ ಡಾ.ವಿಜಯಲಕ್ಷ್ಮಿಸಿ. ಭಟ್ ಅಧಿಕಾರ ಸ್ವೀಕಾರ

ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ನೂತನ ಪ್ರಾಂಶುಪಾಲರಾಗಿ ಡಾ.ವಿಜಯಲಕ್ಷ್ಮಿಸಿ. ಭಟ್ ಅಧಿಕಾರ ಸ್ವೀಕಾರ

Date:

ಉಡುಪಿ, ಅ.30: ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ), ಉಡುಪಿ ನೂತನ ಪ್ರಾಂಶುಪಾಲರಾಗಿ ಡಾ.ವಿಜಯಲಕ್ಷ್ಮಿಸಿ. ಭಟ್ ಅಧಿಕಾರ ಸ್ವೀಕರಿಸಿದರು. ಸಂಸ್ಥೆಯಲ್ಲಿ ಡಾ.ವಿಜಯಲಕ್ಷ್ಮಿ ಸಿ. ಭಟ್ ಅವರು ಸಸ್ಯಶಾಸ್ತ್ರ ಕ್ಷೇತ್ರದಲ್ಲಿ ಎರಡೂವರೆ ದಶಕಗಳಿಗೂ ಹೆಚ್ಚಿನ ಬೋಧನಾ ಮತ್ತು ಸಂಶೋಧನಾ ಅನುಭವ ಹೊಂದಿರುವ ಶಿಕ್ಷಣ ತಜ್ಞರು. ಪೂರ್ಣಪ್ರಜ್ಞ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆಯಾಗಿ ಹಾಗೂ ಶೈಕ್ಷಣಿಕ ಮಂಡಳಿಯ ಸದಸ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಅವರು, ಸಂಸ್ಥೆಯ ಇತಿಹಾಸದಲ್ಲಿ ಪ್ರಾಂಶುಪಾಲರ ಹುದ್ದೆಯನ್ನು ಅಲಂಕರಿಸಿದ ಪ್ರಥಮ ಮಹಿಳೆ ಆಗಿರುವರು.

ಸಂತ ಅಲೋಶಿಯಸ್ ಕಾಲೇಜು, ಮಂಗಳೂರಿನಲ್ಲಿ ಪದವಿ ಶಿಕ್ಷಣವನ್ನು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಮತ್ತು ಪಿಎಚ್.ಡಿ. ಪದವಿಗಳನ್ನು ಪಡೆದಿದ್ದಾರೆ. ದಿವಂಗತ ಡಾ. ಕೆ. ಗೋಪಾಲಕೃಷ್ಣ ಭಟ್ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ಘಟ್ಟಗಳು ಮತ್ತು ಕರಾವಳಿ ಕರ್ನಾಟಕದ ಪಾಚಿ ಸಸ್ಯಗಳ ವರ್ಗೀಕರಣದ ಕುರಿತು ಸಂಶೋಧನೆ ನಡೆಸಿದ್ದಾರೆ. ಯುಜಿಸಿ ಹಾಗೂ ಕರ್ನಾಟಕ ಜೀವವೈವಿಧ್ಯ ಮಂಡಳಿಯ ಸಂಶೋಧನಾ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಅವರು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಪತ್ರಿಕೆಗಳಲ್ಲಿ ಲೇಖನಗಳನ್ನು ಹಾಗೂ ಪುಸ್ತಕಗಳಲ್ಲಿ ಅಧ್ಯಾಯಗಳನ್ನು ಪ್ರಕಟಿಸಿದ್ದಾರೆ. ಅಲ್ಲದೆ, ವಿಚಾರ ಸಂಕಿರಣಗಳು ಮತ್ತು ಕಾರ್ಯಾಗಾರಗಳನ್ನು ಆಯೋಜಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮಟ್ಟದ ಸಸ್ಯಶಾಸ್ತ್ರ ಅಧ್ಯಯನ ಮಂಡಳಿಯ ಸದಸ್ಯೆಯಾಗಿ ಹಾಗೂ ಪರೀಕ್ಷಾ ಮಂಡಳಿಯ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಸಸ್ಯಶಾಸ್ತ್ರ ಅಧ್ಯಾಪಕರ ಸಂಘ ‘ವನಶ್ರೀ’ಯ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2015ರಲ್ಲಿ ನಡೆದ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಅತ್ಯುತ್ತಮ ಭಿತ್ತಿಪತ್ರ ಪ್ರಸ್ತುತಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಇವರು ದಿವಂಗತ ಇಂದಿರಾ ಮತ್ತು ಉಪೇಂದ್ರ ರಾವ್ ಹೊಸಬೆಟ್ಟು ಅವರ ಪುತ್ರಿ ಹಾಗೂ ಉಡುಪಿಯ ಡಾ. ಚಂದ್ರಕಾಂತ್ ಭಟ್ ಅವರ ಧರ್ಮಪತ್ನಿ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂಬಾಗಿಲು ಜಂಕ್ಷನ್ ನಲ್ಲಿ ಯಾವುದೇ ಅಪಘಾತಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.31: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್‌ಗಳನ್ನು ಸಂಗ್ರಹ ಮಾಡಲಾಗುತ್ತದೆ....

ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಅ.30: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ...
error: Content is protected !!