Monday, November 2, 2026
Monday, November 2, 2026

ಕುತ್ಯಾರು: ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕುತ್ಯಾರು: ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

Date:

ಕಾಪು, ನ.1: ಕಾಪು ವಿಧಾನಸಭಾ ಕ್ಷೇತ್ರದ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 60 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ನ.1 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡ್ಡಾಯಿಗುಡ್ಡೆ ತಂದೂರು ರಾಜೇಶ್ ಕುಲಾಲ್ ಮನೆ ವರೆಗೆ ರಸ್ತೆ ಅಭಿವೃದ್ಧಿ – 20 ಲಕ್ಷ, ಕಳತ್ತೂರು ಕೊರಂಟಿಕಟ್ಟೆ ರಸ್ತೆ ಅಭಿವೃದ್ಧಿ – 20 ಲಕ್ಷ, ಕರ್ಮಾರ ಜಿಡ್ಡು ಮುಂದುವರಿದ ರಸ್ತೆ ಅಭಿವೃದ್ಧಿ – 20 ಲಕ್ಷ ಸೇರಿದಂತೆ ಒಟ್ಟು 60 ಲಕ್ಷ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಲತಾ ಆಚಾರ್ಯ, ಕುತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಮಾಜಿ ಉಪಾಧ್ಯಕ್ಷರಾದ ಭಾರತಿ, ಮಾಜಿ ಸದಸ್ಯರಾದ ಆಗ್ನೇಸ್ ಮಾತಾಯಿಸ್, ಸಂಪತ್ ಕುಮಾರ್, ಗಣೇಶ್ ಶೆಟ್ಟಿ, ಶಕ್ತಿ ಕೇಂದ್ರದ ಪ್ರಮುಖ್ ಸುಶಾಂತ್ ಶೆಟ್ಟಿ, ಸ್ಥಳೀಯರಾದ ಕುತ್ಯಾರು ಪ್ರಸಾದ್ ಶೆಟ್ಟಿ, ಕುಟ್ಟಿ ಪೂಜಾರಿ, ರಾಜೇಶ್ ಕುಲಾಲ್, ಜಯ ಶೆಟ್ಟಿ, ಸಂತೋಷ್ ಶೆಟ್ಟಿ, ಚಂದ್ರ, ರೇಖಾ ಶೆಟ್ಟಿಗಾರ್, ಶೋಭಾ ಆಚಾರ್ಯ, ಸುಧಾಕರ್ ಕುಲಾಲ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕನ್ನಡತನ ಬಳಸಿ ಬದುಕು ಕಟ್ಟಿಕೊಳ್ಳೋಣ: ಡಾ.ನರೇಂದ್ರ ಕುಮಾರ್

ಉಡುಪಿ, ನ.2: ಕನ್ನಡತನ ಬಳಸಿ ಬದುಕು ಕಟ್ಟಿಕೊಳ್ಳೋಣ. ಈ ರಾಜ್ಯೋತ್ಸವ ದಿನನಿತ್ಯದ...

ಬಿ.ಬಿ. ಹೆಗ್ಡೆ ಕಾಲೇಜು: ಕನ್ನಡ ಡಿಂಡಿಮ

ಕುಂದಾಪುರ, ನ.2: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ವದ್ದು: ರಾಘವೇಂದ್ರ ಪ್ರಭು ಕರ್ವಾಲು

ಉಡುಪಿ, ನ.1: ಮಕ್ಕಳೇ ಸಮಾಜದ ಮುಂದಿನ ನಿಜವಾದ ಆಸ್ತಿ. ಮಕ್ಕಳ ವ್ಯಕ್ತಿತ್ವ...

ಉಡುಪಿಯ ಕೆಲವೆಡೆ ಮಳೆ

ಉಡುಪಿ, ನ.1: ಉಡುಪಿ ಜಿಲ್ಲೆಯ ಕೆಲವೆಡೆ ಭಾನುವಾರ ಸಂಜೆ ಉತ್ತಮ ಮಳೆಯಾಗಿದೆ....
error: Content is protected !!