Monday, November 2, 2026
Monday, November 2, 2026

ಬಿ.ಬಿ. ಹೆಗ್ಡೆ ಕಾಲೇಜು: ಕನ್ನಡ ಡಿಂಡಿಮ

ಬಿ.ಬಿ. ಹೆಗ್ಡೆ ಕಾಲೇಜು: ಕನ್ನಡ ಡಿಂಡಿಮ

Date:

ಕುಂದಾಪುರ, ನ.2: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಭಾಷಾ ಸಂಘದ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕನ್ನಡ ಡಿಂಡಿಮ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನವಂಬರ್ 1 ರಂದು ನಡೆಯಿತು. ಕರ್ನಾಟಕ ಪಬ್ಲಿಕ್ ಸ್ಕೂಲ್, ಬಿದ್ಕಲ್ ಕಟ್ಟೆ ಇಲ್ಲಿನ ಉಪ ಪ್ರಾಂಶುಪಾಲರಾದ ಕರುಣಾಕರ ಶೆಟ್ಟಿ ಎಮ್. ಅವರು ಮಾತನಾಡಿ, ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ; ಅದು ನಮ್ಮ ಅಸ್ಮಿತೆ, ಸಂಸ್ಕೃತಿ ಮತ್ತು ಸ್ವಾಭಿಮಾನದ ಪ್ರತೀಕ. ಕನ್ನಡಿಗರಾದ ನಾವು ನಮ್ಮ ಭಾಷೆಯ ಬಗ್ಗೆ ಅಭಿಮಾನ ಹೊಂದುವುದಷ್ಟೇ ಅಲ್ಲದೆ, ದೈನಂದಿನ ಬದುಕಿನಲ್ಲಿ ಕನ್ನಡದ ಬಳಕೆಯನ್ನು ಹೆಚ್ಚಿಸಬೇಕು. ಕನ್ನಡ ಶಾಲೆಗಳು, ಕನ್ನಡ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಜಾಗತೀಕರಣದ ಈ ಕಾಲಘಟ್ಟದಲ್ಲಿ ಅನ್ಯಭಾಷೆಗಳನ್ನು ಕಲಿಯುವ ಜೊತೆಗೆ ಮಾತೃಭಾಷೆಯಾದ ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಭಾಷಾ ಸಂಘದ ಸಂಯೋಜಕರಾದ ಸ್ವಾತಿ ಜಿ. ರಾವ್, ಮೇಘ ಎಸ್. ಭಟ್, ಸರೋಜಾ ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು. ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಿದ ಕನ್ನಡ ಗೀತ ಗಾಯನ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕನ್ನಡ ಗೀತೆಗಳನ್ನು ಹಾಡಿದರು. ಉಪ ಪ್ರಾಂಶುಪಾಲ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಭಾಷಾ ಸಂಘದ ಸಂಯೋಜಕಿ ಪ್ರವೀಣಾ ಎಮ್. ಪೂಜಾರಿ ವಂದಿಸಿದರು. ವಿದ್ಯಾರ್ಥಿಗಳಾದ ಸಿಂಚನ ಅತಿಥಿಗಳನ್ನು ಪರಿಚಯಿಸಿ, ನಾಗರತ್ನ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕನ್ನಡತನ ಬಳಸಿ ಬದುಕು ಕಟ್ಟಿಕೊಳ್ಳೋಣ: ಡಾ.ನರೇಂದ್ರ ಕುಮಾರ್

ಉಡುಪಿ, ನ.2: ಕನ್ನಡತನ ಬಳಸಿ ಬದುಕು ಕಟ್ಟಿಕೊಳ್ಳೋಣ. ಈ ರಾಜ್ಯೋತ್ಸವ ದಿನನಿತ್ಯದ...

ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ವದ್ದು: ರಾಘವೇಂದ್ರ ಪ್ರಭು ಕರ್ವಾಲು

ಉಡುಪಿ, ನ.1: ಮಕ್ಕಳೇ ಸಮಾಜದ ಮುಂದಿನ ನಿಜವಾದ ಆಸ್ತಿ. ಮಕ್ಕಳ ವ್ಯಕ್ತಿತ್ವ...

ಕುತ್ಯಾರು: ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.1: ಕಾಪು ವಿಧಾನಸಭಾ ಕ್ಷೇತ್ರದ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ...

ಉಡುಪಿಯ ಕೆಲವೆಡೆ ಮಳೆ

ಉಡುಪಿ, ನ.1: ಉಡುಪಿ ಜಿಲ್ಲೆಯ ಕೆಲವೆಡೆ ಭಾನುವಾರ ಸಂಜೆ ಉತ್ತಮ ಮಳೆಯಾಗಿದೆ....
error: Content is protected !!