Saturday, November 23, 2024
Saturday, November 23, 2024

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್‌ಪಾಲ್ ಸುವರ್ಣ

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್‌ಪಾಲ್ ಸುವರ್ಣ

Date:

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ ವತಿಯಿಂದ ಪತ್ರಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿರುವುದಾಗಿ ಫೆಡರೇಶನ್ ಅಧ್ಯಕ್ಷರಾದ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಫೆಡರೇಶನ್ ಸದಸ್ಯರ ಮಕ್ಕಳು 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80, 2020-21ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.60 ಅಂಕಗಳಿಸಿದ
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಇತರ ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.95, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.85, 2020-21ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 75, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ
ಶೇ.70 ಅಂಕಗಳಿಸಿರಬೇಕು.

ದಿನಾಂಕ: 30.07.2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್‌ನ ಶಾಖಾ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾವ್ಯವನ್ನು ರಂಗರೂಪಕ್ಕೆ ತರುವುದು ಸಾಹಸ: ಪ್ರೊ.ಬಿ.ಎ. ವಿವೇಕ ರೈ

ಮೂಡುಬಿದಿರೆ, ನ.23: ಬರಹ ಅಥವಾ ಕಾವ್ಯವನ್ನು ರಂಗರೂಪಕ್ಕೆ ತರುವುದು ಒಂದು ಸಾಹಸ....

ನಮ್ಮ ಉಳಿವಿಗಾಗಿ ಪಶ್ಚಿಮ ಘಟ್ಟದ ಸಂರಕ್ಷಣೆ ಅತ್ಯಗತ್ಯ

ಮಂಗಳೂರು, ನ.23: ‘ಸಾರ ಸಂಸ್ಥೆ’ ‘ಪರಿಸರಕ್ಕಾಗಿ ನಾವು’ ವೇದಿಕೆಯ ಸಹಯೋಗದೊಂದಿಗೆ ಡಾ....

ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ, ನ.23: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ

ಉಡುಪಿ, ನ.22: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ...
error: Content is protected !!