ಉಡುಪಿ, ನ.4: ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಮಣಿಪಾಲದ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಸಭಾಂಗಣದಲ್ಲಿ, ಪ್ರಸಕ್ತ ಸಾಲಿಗೆ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗೆ ಆಯ್ಕೆಯಾದ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯತ್ (“ಬಡತನ ಮುಕ್ತ ಮತ್ತು ಸುಧಾರಿತ ಜೀವನೋಪಾಯ ಪಂಚಾಯತ್” ವಿಷಯದಲ್ಲಿ ಪ್ರಥಮ), ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮ ಪಂಚಾಯತ್ (“ಆರೋಗ್ಯಕರ ಗ್ರಾಮ ಪಂಚಾಯತ್” ವಿಷಯದಡಿ ದ್ವಿತೀಯ), ಹೆಬ್ರಿ ತಾಲೂಕಿನ ಮಡಾಮಕ್ಕಿ ಗ್ರಾಮ ಪಂಚಾಯತ್ (“ಜಲ ಸಮೃದ್ಧ ಪಂಚಾಯತ್” ವಿಷಯದಡಿ ದ್ವಿತೀಯ), ಕಾರ್ಕಳ ತಾಲೂಕಿನ ಸಾಣೂರು ಗ್ರಾಮ ಪಂಚಾಯತ್ (“ಸ್ವಾವಲಂಬಿ ಮೂಲಸೌಕರ್ಯ ಹೊಂದಿರುವ ಪಂಚಾಯತ್” ವಿಷಯದಡಿ ತೃತೀಯ) ಮತ್ತು ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮ ಪಂಚಾಯತ್ (“ಸಾಮಾಜಿಕ ನ್ಯಾಯ ಮತ್ತು ಭದ್ರತೆ ಹೊಂದಿರುವ ಪಂಚಾಯತ್” ವಿಷಯದಡಿ ತೃತೀಯ ಸ್ಥಾನ) ಪಡೆದಿದ್ದು, ಸದರಿ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು.
ಶಾಸಕರುಗಳಾದ ಯಶ್‌ಪಾಲ್ ಎ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಹಾಗೂ ಎ ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಶಾಸಕರುಗಳಾದ ಮಂಜುನಾಥ್ ಭಂಡಾರಿ ಹಾಗೂ ಡಾ. ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.




By
ForthFocus™