ಕಾಪು, ನ.4: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪಬ್ಲಿಕ್ ಟಿವಿ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕ ಎಚ್ ಆರ್ ರಂಗನಾಥ್ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು. ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಲಾಯಿತು. ದೇವಳದ ನವನಿರ್ಮಾಣದ ಬಗ್ಗೆ ಮತ್ತು ನವದುರ್ಗಾ ಲೇಖನ ಯಜ್ಞದ ಬಗ್ಗೆ ಸವಿವರವಾದ ಮಾಹಿತಿಯನ್ನು ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ನೀಡಿದರು.
ಎಚ್ ಆರ್ ರಂಗನಾಥ್ ಅವರು ಲೇಖನ ಬರೆಯುವ ಮೂಲಕ ಕಾಪುವಿನ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದರು. ದೇವಳದ ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ ಹಾಗೂ ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಉಪಸ್ಥಿತರಿದ್ದರು.




By
ForthFocus™