ಉಡುಪಿ, ನ.5: ಸಿಂಡಿಕೇಟ್ ಬ್ಯಾಂಕಿನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನಿವೃತ್ತರಾದ ಮೇಲೆ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್‍ನಲ್ಲೂ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಸಾಮಾಜಿಕ ಕಾರ್ಯಕರ್ತ ಯು. ದಾಮೋದರ (94) ಇಂದು (05.11.2026) ನಿಧನರಾದರು. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ. ಇವರು ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಪರ್ಯಾಯ ಸಮಿತಿಗಳಲ್ಲಿ ಪದಾಧಿಕಾರಿಯಾಗಿ ಹಲವು ಸಂಘ-ಸಂಸ್ಥೆಗಳ ಸದಸ್ಯರಾಗಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಉಡುಪಿಯ ಎಲ್ಲಾ ಸಾಂಸ್ಕøತಿಕ ಕಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಯಕ್ಷಗಾನ ಕಲಾರಂಗದ ಸ್ಥಾಪಕ ಸದಸ್ಯರಾಗಿ ದೀರ್ಘಕಾಲ ಸಂಸ್ಥೆಯೊಂದಿಗೆ ಸಕ್ರಿಯರಾಗಿದ್ದರು. ಸಂಸ್ಥೆ ಅವರಿಗೆ ಯಕ್ಷಗಾನ ಕಾರ್ಯಕರ್ತರಿಗೆ ನೀಡುವ ‘ಯಕ್ಷಚೇತನ’ ಪ್ರಶಸ್ತಿ ನೀಡಿ ಗೌರವಿಸಿದೆ. ಅವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಯು. ದಾಮೋದರ ನಿಧನ
ಸಾಮಾಜಿಕ ಕಾರ್ಯಕರ್ತ ಯು. ದಾಮೋದರ ನಿಧನ
Date:




By
ForthFocus™