ಹಿರಿಯಡಕ, ನ.5: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಪ್ರಸಾದ್ ನೇತ್ರಾಲಯ ಉಡುಪಿ ಇವರ ಸಹಭಾಗಿತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಹಿರಿಯಡಕ ದೇವಾಡಿಗ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕಣ್ಣಿನ ಉಚಿತ ತಪಾಸಣಾ ಶಿಬಿರದಲ್ಲಿ 150 ಜನರಿಗೆ ಕನ್ನಡಕ ಮಂಜೂರಾಗಿದ್ದು ಗುರುವಾರ ಹಿರಿಯಡಕ ಶಾಸಕರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು.
ಪ್ರಸಾದ್ ನೇತ್ರಾಲಯದ ಡಾ. ಕೃಷ್ಣಪ್ರಸಾದ್, ಜೀಯಾನಂದ ಹೆಗಡೆ, ಪ್ರವೀಣ್ ಪೂಜಾರಿ ಹೀರೆಬೆಟ್ಟು, ಶೇಖರ್ ಶೆಟ್ಟಿ, ಬೊಮ್ಮರಬೆಟ್ಟು ಶಕ್ತಿ ಕೇಂದ್ರದ ಪ್ರಮುಖ್ ಉದಯ್ ಶೆಟ್ಟಿ ಉಪಸ್ಥಿತರಿದ್ದರು.




By
ForthFocus™