Friday, September 11, 2026
Friday, September 11, 2026

ಭಾರತವನ್ನು ಪ್ರಬಲ ರಾಷ್ಟ್ರವಾಗಿಸುವ ಗುರಿಯನ್ನು ಹೊಂದಿದ ಹಿರಿಯ ಚೇತನ ಡಾ. ಶ್ಯಾಮಪ್ರಸಾದ್ ಮುಖರ್ಜಿ: ರಾಘು ಸುವರ್ಣ

ಭಾರತವನ್ನು ಪ್ರಬಲ ರಾಷ್ಟ್ರವಾಗಿಸುವ ಗುರಿಯನ್ನು ಹೊಂದಿದ ಹಿರಿಯ ಚೇತನ ಡಾ. ಶ್ಯಾಮಪ್ರಸಾದ್ ಮುಖರ್ಜಿ: ರಾಘು ಸುವರ್ಣ

Date:

ಸಾಣೂರು: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಸಂಘಟನೆ ಉಡುಪಿ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ ಆಶ್ರಯದಲ್ಲಿ ಸಾಣೂರು ಯುವಕ ಮಂಡಲದ ಸಭಾಂಗಣದಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿ ಜನ್ಮ ದಿನಾಚರಣೆ ಆಚರಿಸಲಾಯಿತು.

ಸಾಣೂರು ಯುವಕ ಮಂಡಲದ ಹಿರಿಯ ಸದಸ್ಯರಾದ ರಾಘು ಸುವರ್ಣ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ, ಭಾರತೀಯ ಸಂಸ್ಕೃತಿಯ ಆಧಾರದ ಮೇಲೆ ದೇಶವನ್ನು ಪುನರ್ ನಿರ್ಮಾಣ ಮಾಡುವ ಹಾಗೂ ಜಗತ್ತಿನಲ್ಲಿ ಭಾರತವನ್ನು ಪ್ರಬಲ ರಾಷ್ಟ್ರವಾಗಿಸುವ ಗುರಿಯನ್ನು ಹೊಂದಿ ಆ ಮಹಾನ್ ಕಾರ್ಯಕ್ಕೆ ತಮ್ಮ ಬದುಕನ್ನು ಮುಡಿಪಾಗಿಟ್ಟ ಹಿರಿಯ ಚೇತನ ಡಾ. ಶ್ಯಾಮಪ್ರಸಾದ್ ಮುಖರ್ಜಿ ಎಂದರು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಕರುಣಾಕರ್ ಎಸ್ ಕೋಟ್ಯಾನ್, ವಿಶ್ವನಾಥ್ ಶೆಟ್ಟಿ, ಗೋಪಾಲ್ ಶೇರಿಗಾರ್, ಮಂಡಲದ ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಕುಮಾರ್, ಪ್ರಕಾಶ್ ಮಡಿವಾಳ, ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

.ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ ಸ್ವಾಗತಿಸಿ, ಕೋಶಾಧಿಕಾರಿ ರಾಜೇಶ್ ಪೂಜಾರಿ ವಂದಿಸಿದರು. ಕಾರ್ಯದರ್ಶಿ ಮೋಹನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ.25 ರಿಂದ 27: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ (ಮಿಲೆಟ್ ಫೆಸ್ಟಿವಲ್) ಮತ್ತು ಬೃಹತ್ ಆಹಾರ ಮೇಳ

ಉಡುಪಿ, ಸೆ.11: ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರು ಪಲ್ಸ್ ಇವೆಂಟ್ ಇವರಿಂದ...

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...
error: Content is protected !!