ಉಡುಪಿ, ನ.5: ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿಯ ಬ್ರಹ್ಮಗಿರಿಯ ಬಾಲಭವನದಲ್ಲಿ ನವೆಂಬರ್ 12 ರಂದು ಬೆಳಗ್ಗೆ 10 ಗಂಟೆಯಿಂದ 9 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಸೃಜನಾತ್ಮಕ ಪ್ರದರ್ಶನ ಕಲೆ, ವಿಜ್ಞಾನದಲ್ಲಿ ನೂತನ ಆವಿಷ್ಕಾರ, ಸೃಜನಾತ್ಮಕ ಕಲೆ, ಸೃಜನಾತ್ಮಕ ಬರವಣಿಗೆ ಹಾಗೂ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳು ಬೆಂಗಳೂರಿನ ರಾಜ್ಯ ಬಾಲ ಭವನ ಸೊಸೈಟಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಲಾಶ್ರೀ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574978 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.




By
ForthFocus™