Saturday, November 7, 2026
Saturday, November 7, 2026

ವಿದ್ಯಾರ್ಥಿಗಳು ಸಂವೇದನಾಶೀಲತೆಯನ್ನು ಬೆಳೆಸಿಕೊಳ್ಳಬೇಕು: ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ

ವಿದ್ಯಾರ್ಥಿಗಳು ಸಂವೇದನಾಶೀಲತೆಯನ್ನು ಬೆಳೆಸಿಕೊಳ್ಳಬೇಕು: ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ

Date:

ಕುಂದಾಪುರ, ನ.6: ವಿದ್ಯಾರ್ಥಿಗಳ ಜೀವನದಲ್ಲಿ ತಂದೆ, ತಾಯಿ, ಗುರು ಎನ್ನುವ ಮೂರು ಮೌಲ್ಯಗಳನ್ನು ಅರ್ಥೈಸಿಕೊಂಡರೆ ಎಲ್ಲವನ್ನು ಪಡೆಯಲು ಸಾಧ್ಯ. ನಮ್ಮ ನಡುವಿನ ವ್ಯಕ್ತಿಗಳ ವ್ಯಕ್ತಿತ್ವದಿಂದ ಕಲಿಯುವಂತದ್ದು ತುಂಬಾ ಇದೆ. ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳುವುದರ ಜೊತೆಗೆ ಸಂವೇದನಾಶೀಲತೆಯನ್ನು ಬೆಳೆಸಿಕೊಂಡರೆ ಸತ್ಪ್ರಜೆಗಳಾಗಲು ಸಾಧ್ಯ ಎಂದು ಕುಂದಾಪುರದ ನ್ಯಾಯವಾದಿಗಳಾದ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ್ದ ʼಜೀವನ ಮೌಲ್ಯ’ಸರಣಿ ಉಪನ್ಯಾಸ ಮಾಲಿಕೆ-4ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್‌ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಜನ್‌ ಪ್ರಾರ್ಥಿಸಿ, ರಜತ್‌ ಸ್ವಾಗತಿಸಿ, ಕೃತಿ ಕೆ. ದೇವಾಡಿಗ ಅತಿಥಿಗಳನ್ನು ಪರಿಚಯಿಸಿ, ಧನ್ಯಶ್ರೀ ವಂದಿಸಿದರು. ಪ್ರಥ್ವಿನಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಉಡುಪಿಯ ಅಜಯ್ ಪುರುಷೋತ್ತಮ ಶೆಟ್ಟಿ

ಉಡುಪಿ, ನ.7: ಉಡುಪಿಯ ಉದ್ಯಮಿ ಅಜಯ್ ಪುರುಷೋತ್ತಮ ಶೆಟ್ಟಿ ಅವರು ನವದೆಹಲಿಯ...

ಕ್ಯಾನ್ಸರ್ ತಪಾಸಣಾ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಶಿಬಿರ

ಉಡುಪಿ, ನ.7: ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗ,...

ಉಡುಪಿ: ಗುಡುಗು ಸಹಿತ ಮಳೆ

ಉಡುಪಿ, ನ.6: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ಗುಡುಗು ಸಹಿತ...
error: Content is protected !!