Sunday, November 8, 2026
Sunday, November 8, 2026

ಕ್ಯಾನ್ಸರ್ ತಪಾಸಣಾ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಶಿಬಿರ

ಕ್ಯಾನ್ಸರ್ ತಪಾಸಣಾ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಶಿಬಿರ

Date:

ಉಡುಪಿ, ನ.7: ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗ, ಕುಟುಂಬ ವೈದ್ಯಕೀಯ ವಿಭಾಗ, ಸಮುದಾಯ ಆಂಕಾಲಜಿ ಕೇಂದ್ರ ಮತ್ತು ಜಿಲ್ಲಾ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕ್ಯಾನ್ಸರ್ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಶಿಬಿರವನ್ನು ಆಯೋಜಿಸಲಾಯಿತು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಶೋಕ ಹೆಚ್ ಮಾತನಾಡಿ, ಮಹಿಳೆಯರಲ್ಲಿ ಕ್ಯಾನ್ಸರ್ ಬಗ್ಗೆ ಮುಂಚಿತವಾಗಿ ಪತ್ತೆ ಹಚ್ಚುವ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ನಿಯಮಿತ ತಪಾಸಣೆಗೆ ಪ್ರೋತ್ಸಾಹಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.

ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ಮಕ್ಕಳ ತಜ್ಞರಾದ ಡಾ. ಸಂದೀಪ್ ಎಂ.ಎಸ್., ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕರು ಹಾಗೂ ವಿಭಾಗ ಮುಖ್ಯಸ್ಥರಾದ ಡಾ. ಅಶ್ವಿನಿ ಕುಮಾರ್, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ಕವಿತಾ ಹಾಗೂ ಸಮುದಾಯ ವೈದ್ಯಕೀಯ ವಿಭಾಗದ ಡಾ. ರತ್ನಾ ಜೆ., ಡಾ. ಸುಚರಿತಾ ಎಸ್., ಹಾಗೂ ಕುಟುಂಬ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅನುನಾ ವಿನೋದ್ ಹಾಗೂ ಡಾ. ಶ್ರೀರಕ್ಷಾ ಉಪಸ್ಥಿತರಿದ್ದರು.

ಪ್ಯಾಪ್ ಸ್ಮಿಯರ್ ಪರೀಕ್ಷೆ ಹಾಗೂ ಸ್ವಯಂ ಸ್ತನ ಪರೀಕ್ಷೆ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಡಾ ಗ್ರಾಮ: ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.8: ಕಾಪು ವಿಧಾನಸಭಾ ಕ್ಷೇತ್ರದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಟೆಕ್ಸಾಸ್‌ನಲ್ಲಿ ಎಸ್‌ಬಿಐ ಹೊಸ ಶಾಖೆ ಆರಂಭ; ಅಮೆರಿಕದಲ್ಲೂ ಬ್ಯಾಂಕಿಂಗ್ ವಿಸ್ತರಿಸಿದ ಸ್ಟೇಟ್ ಬ್ಯಾಂಕ್

ಯು.ಬಿ.ಎನ್.ಡಿ., ನ.8: ಅಮೆರಿಕದಲ್ಲಿ ಭಾರತದ ಬ್ಯಾಂಕಿಂಗ್ ಉಪಸ್ಥಿತಿಯನ್ನು ಬಲಪಡಿಸುವ ಮತ್ತು ಗ್ರಾಹಕರಿಗೆ...

ಭಾರತದಾದ್ಯಂತ ಇ20 ಪೆಟ್ರೋಲ್ ನಿಗದಿತ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತದೆ: ಪೆಟ್ರೋಲಿಯಂ ಸಚಿವಾಲಯ

ನವದೆಹಲಿ, ನ.8: ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ...

ಯಕ್ಷಗಾನ ಕಲಾರಂಗದ 108ನೇ ಮನೆ ಹಸ್ತಾಂತರ

ಉಡುಪಿ, ನ.8: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್...
error: Content is protected !!