Monday, July 27, 2026
Monday, July 27, 2026

ಕೆ.ಎಂ.ಸಿ ಮಣಿಪಾಲ- ಗ್ಯಾಸ್ಟ್ರೋಇಂಟೆಸ್ಟಿನಲ್ ರೇಡಿಯೇಷನ್ ಆಂಕೊಲಾಜಿ ಸ್ಪೆಷಾಲಿಟಿ ಕ್ಲಿನಿಕ್ ಆರಂಭ

ಕೆ.ಎಂ.ಸಿ ಮಣಿಪಾಲ- ಗ್ಯಾಸ್ಟ್ರೋಇಂಟೆಸ್ಟಿನಲ್ ರೇಡಿಯೇಷನ್ ಆಂಕೊಲಾಜಿ ಸ್ಪೆಷಾಲಿಟಿ ಕ್ಲಿನಿಕ್ ಆರಂಭ

Date:

ಮಣಿಪಾಲ: ರೇಡಿಯೊಥೆರಪಿ ಮತ್ತು ಆಂಕೊಲಾಜಿ ವಿಭಾಗದ ಸಹಯೋಗದೊಂದಿಗೆ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಲ್ಲಿ ಇಂದು ಗ್ಯಾಸ್ಟ್ರೊಇಂಟೆಸ್ಟಿನಲ್ ರೇಡಿಯೇಶನ್ ಆಂಕೊಲಾಜಿ ಸ್ಪೆಷಾಲಿಟಿ ಕ್ಲಿನಿಕ್ ಗೆ ಚಾಲನೆ ನೀಡಲಾಯಿತು.

ಇಂದು ನಡೆದ ಸರಳ ಕಾರ್ಯಕ್ರಮದಲ್ಲಿ ಕೆಎಂಸಿ ಮಣಿಪಾಲದ ಡೀನ್ ಡಾ. ಶರತ್ ಕೆ ರಾವ್ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮುಖ್ಯ ನಿರ್ವಹಣಾಧಿಕಾರಿ ಡಾ. ಆನಂದ್ ವೇಣುಗೋಪಾಲ್ ಅವರು ಜಂಟಿಯಾಗಿ ಉದ್ಘಾಟಿಸಿದರು. ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ. ರೇಡಿಯೊಥೆರಪಿ ಆಂಕೊಲಾಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಕೃಷ್ಣ ಶರಣ್ ಮತ್ತು ರೇಡಿಯೊಥೆರಪಿ ಆಂಕೊಲಾಜಿ ವಿಭಾಗದ ಸಹ ಪ್ರಾಧ್ಯಾಪಕ ಡಾ. ಶೆರ್ಲಿ ಲೂಯಿಸ್ ಸಾಲಿನ್ಸ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಡಾ. ಶರತ್ ಕೆ ರಾವ್ ಅವರು ಹೊಸ ಸ್ಪೆಷಾಲಿಟಿ ಮತ್ತು ಸಬ್ ಸ್ಪೆಷಾಲಿಟಿ ಕ್ಲಿನಿಕ್ಗಳ ಪ್ರಾಮುಖ್ಯತೆಯ ಕುರಿತು ಮಾತನಾಡಿದರು ಮತ್ತು ಮೊದಲಿನಿಂದಲೂ ಹೊಸ ಸೇವೆಗಳನ್ನು ಪ್ರಾರಂಭಿಸಲು ಮತ್ತು ಒದಗಿಸುವಲ್ಲಿ ಕೆಎಂಸಿ ಮುಂಚೂಣಿಯಲ್ಲಿದೆ ಎಂದರು.

ಡಾ. ಆನಂದ್ ವೇಣುಗೋಪಾಲ್ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಮಣಿಪಾಲದ ಸಮಗ್ರ ಕ್ಯಾನ್ಸರ್ ಕೇರ್ ಸೆಂಟರ್ ಅನ್ನು ಬೆಳೆಸಿರುವುದು ನನಗೆ ತುಂಬಾ ಖುಷಿ ತಂದಿದೆ. ಈಗ ಅದರ ಸಮಗ್ರ ರೋಗಿಗಳ ಆರೈಕೆಗೆ ಮತ್ತೊಂದು ಗರಿ ಸೇರ್ಪಡೆಯಾಗಿದೆ ಎಂದರು.

ಈ ವಿಶೇಷ ಚಿಕಿತ್ಸಾಲಯವು ಡಾ. ಶೆರ್ಲಿ ಲೂಯಿಸ್ ಸಲೀನ್ಸ್ ಅವರ ನೇತೃತ್ವದಲ್ಲಿ ನಡೆಯಲಿದೆ. ಡಾ. ಶೆರ್ಲಿ ಲೂಯಿಸ್ ಅವರು ಟೊರೊಂಟೊದ ‘ಟೊರೊಂಟೊ ವಿಶ್ವವಿದ್ಯಾಲಯ’ದ ಪ್ರಿನ್ಸೆಸ್ ಮಾರ್ಗರೇಟ್ ಕ್ಯಾನ್ಸರ್ ಕೇಂದ್ರದಿಂದ ಗ್ಯಾಸ್ಟ್ರೊಇಂಟೆಸ್ಟಿನಲ್ ರೇಡಿಯೇಶನ್ ಆಂಕೊಲಾಜಿಯಲ್ಲಿ ಒಂದು ವರ್ಷದ ಕ್ಲಿನಿಕಲ್ ರಿಸರ್ಚ್ ಫೆಲೋಶಿಪ್ ಪಡೆದಿರುತ್ತಾರೆ. ಅವರು ರಜಾ ದಿನ ಹೊರತು ಪಡಿಸಿ ಪ್ರತೀ ದಿನ ಸಮಾಲೋಚನೆಗೆ ಲಭ್ಯವಿರುತ್ತಾರೆ ಎಂದು ಡಾ. ಅವಿನಾಶ್ ಶೆಟ್ಟಿ ತಿಳಿಸಿದರು. ಡಾ. ಶೆರ್ಲಿ ಲೂಯಿಸ್ ಸಲಿನ್ಸ್ ಗ್ಯಾಸ್ಟ್ರೋಇಂಟೆಸ್ಟಿನಲ್ ರೇಡಿಯೇಷನ್ ಆಂಕೊಲಾಜಿ ಸ್ಪೆಷಾಲಿಟಿ ಕ್ಲಿನಿಕ್ ನ ಅವಲೋಕನ ನೀಡಿ ಅದರ ವ್ಯಾಪ್ತಿಯ ಕುರಿತು ಮಾತನಾಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!