ಹಿರಿಯಡಕ, ನ.8: ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ನಿವೃತ್ತರಾದ ಕನ್ನಡ ಸಹ ಪ್ರಾಧ್ಯಾಪಕಿ ಡಾ. ಸೌಮ್ಯಲತಾ ಪಿ ಅವರು ಉದಾರವಾಗಿ ನವೀಕರಿಸಿಕೊಟ್ಟ ಕಾಲೇಜಿನ ಮುಖ್ಯದ್ವಾರವನ್ನು ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿ ಕೃತಜ್ಞತೆ ಸಲ್ಲಿಸಿದರು. ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ವಲಯದ ಜಂಟಿ ನಿರ್ದೇಶಕರಾದ ಡಾ. ಕವಿತಾ ಕೆ. ಆರ್. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಇಲಾಖೆಗೆ ನೀಡಿದ ಕೊಡುಗೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.

ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್., ನಿವೃತ್ತ ಪ್ರಾಂಶುಪಾಲ ಶ್ರೀವರ್ಮ ಅಜ್ರಿ ಎಂ., ಸಂಧ್ಯಾ ಕಾಮತ್, ಚೆನ್ನಿಬೆಟ್ಟು ವಸಂತ ಶೆಟ್ಟಿ, ಐಕ್ಯುಎಸಿ ಸಂಚಾಲಕ ಡಾ. ಲಿತಿನ್ ಬಿ ಎಂ ಹಾಗೂ ನಿವೃತ್ತಿಯ ಹೊತ್ತಿನಲ್ಲಿ ಕಾಲೇಜಿಗೆ ಕೊಡುಗೆ ನೀಡಿದ ಡಾ. ಸೌಮ್ಯಲತಾ ಪಿ ಮತ್ತು ಬೋಧಕ, ಬೋಧಕೇತರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರಾ.ಸೇ.ಯೋ. ಯೋಜನಾಧಿಕಾರಿ ನಂದೀಶ್ ಕುಮಾರ್ ಕೆ ಸಿ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು.




By
ForthFocus™