ಕಾಪು, ನ.8: ಕಾಪು ವಿಧಾನಸಭಾ ಕ್ಷೇತ್ರದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 60 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ನ.6 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಸ್ವತಿ ಶಾಲೆ ಹಿಂದುಗಡೆ ರಸ್ತೆ ಅಭಿವೃದ್ಧಿ – 20 ಲಕ್ಷ, 5ನೇ ವಾರ್ಡಿನ ಜಾನಕಿ ಪೂಜಾರ್ತಿ ಮನೆ ತನಕ ರಸ್ತೆ ಅಭಿವೃದ್ಧಿ – 20 ಲಕ್ಷ, 2ನೇ ವಾರ್ಡಿನ ಪೊಲ್ಯ ಇಬ್ರಾಹಿಂ ಮನೆ ತನಕ ರಸ್ತೆ ಅಭಿವೃದ್ಧಿ – 20 ಲಕ್ಷ ರೂಪಾಯಿ ವೆಚ್ಚದ ಸೇರಿದಂತೆ ಒಟ್ಟು 60 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಕೇಸರಿ ಯುವರಾಜ್, ಉಚ್ಚಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಚಂದ್ರಶೇಖರ್ ಕೋಟ್ಯಾನ್, ಬಡಾ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ವಸಂತ ದೇವಾಡಿಗ, ಸ್ಥಳೀಯರಾದ ಶಶಿಧರ ಕೋಟ್ಯಾನ್, ಚಂದ್ರಹಾಸ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.




By
ForthFocus™