Monday, November 9, 2026
Monday, November 9, 2026

‘ಉಗಮ-2026’ ಉದ್ಘಾಟನೆ

‘ಉಗಮ-2026’ ಉದ್ಘಾಟನೆ

Date:

ಕುಂದಾಪುರ, ನ.9: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಧನಾತ್ಮಕ ಚಿಂತನೆ ಬೆಳೆಯುತ್ತದೆ. ಸಹಾಯ, ಸಹಕಾರಗಳು ಸಾಧ್ಯವಾಗುವುದು ಇಂತಹ ಸಾಹಿತ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡು ಶಿಕ್ಷಣದ ನಿಜವಾದ ಅರ್ಥವನ್ನು ಅರ್ಥೈಸಿಕೊಳ್ಳಿ ಎಂದು ಅರಣ್ಯ ಗುತ್ತಿಗೆದಾರ, ಉದ್ಯಮಿ ಜಯಪ್ರಕಾಶ್ ಶೆಟ್ಟಿ ಕಟ್ಕೇರಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪದವಿಪೂರ್ವ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಸಾಹಿತ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ʼಉಗಮ 2026ʼನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ವಿಕಾಸ್ ಶೆಟ್ಟಿ‌, ಎಸ್ಕ್ಯೂಎಸಿ ಪ್ರತಿನಿಧಿ ಖುಷಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಅಭಿಷೇಕ್, ಕ್ರೀಡಾ ಕಾರ್ಯದರ್ಶಿ ನಿಶಾಂತ್ ಡಿಸೋಜ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ತನುಜಾ ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮ ಸಂಯೋಜಕಿ ರೇಷ್ಮಾ ಶೆಟ್ಟಿ ವಂದಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಯೋಗೀಶ್ ಶಾನುಭೋಗ್ ನಿರೂಪಿಸಿದರು. ವಿದ್ಯಾರ್ಥಿ ಆದಿತ್ಯ ಪ್ರಾರ್ಥಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬೆಳಗಿತು 198 ದೀಪಗಳು

ಕಾಪು, ನ.9: ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಕಾಪು ಶ್ರೀ ಹೊಸ...

ಯಕ್ಷಗಾನ ಕಲಾರಂಗಕ್ಕೆ ಯಕ್ಷಾಧ್ವರ್ಯು ಪ್ರಶಸ್ತಿ

ಉಡುಪಿ, ನ.9: ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನವು ನ.7 ರಂದು ಆಯೋಜಿಸಿದ ಸಂಪಾಜೆ...

ಸುಮನಸಾ ಕೊಡವೂರು- ‘ಚೈತನ್ಯ ರಂಗ’ ಆಶ್ರಮ ಸೇವಾ ಕಾರ್ಯಕ್ರಮ

ಉಡುಪಿ, ನ.9: ಸುಮನಸಾ ಕೊಡವೂರು ಸಂಸ್ಥೆಯ ರಜತ ಸಂಭ್ರಮ ಸರಣಿ ಕಾರ್ಯಕ್ರಮಗಳಲ್ಲಿ...

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ಧಿ- ನ.13 ರಂದು ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ನ.9: ನಗರದ ಕಲ್ಸಂಕ ಅಂಬಾಗಿಲು ರಸ್ತೆಯ ಗುಂಡಿಬೈಲಿನಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ...
error: Content is protected !!