Wednesday, November 11, 2026
Wednesday, November 11, 2026

ಮಣಿಪಾಲ ಜ್ಞಾನಸುಧಾ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಮಣಿಪಾಲ ಜ್ಞಾನಸುಧಾ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Date:

ಉಡುಪಿ, ನ.11: ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಅತ್ಯುತ್ತಮ ಪಠ್ಯೇತರ ಚಟುವಟಿಕೆಗಳಲ್ಲೊಂದು ರಾಷ್ಟ್ರೀಯ ಸೇವಾ ಯೋಜನೆ ಎಂದು ಅಜೆಕಾರು ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್ನ ಅನಿಲ್ ಕುಮಾರ್ ಹೇಳಿದರು. ಅವರು ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಜ್ಞಾನಸುಧಾ ವಿದ್ಯಾರ್ಥಿಗಳು ಓದಿನಲ್ಲಿ ಸಾಧನೆ ಮಾಡುವುದರ ಜೊತೆಗೆ ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಭವಿಷ್ಯದ ನಾಯಕರಾಗುವ ಕನಸು ಕಾಣಬೇಕು ಎಂದು ಹೇಳಿದರು. ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಾಧಿಕಾರಿಗಳಾದ ಡಾ. ಕೆ ಶ್ರೀಧರ ರಂಗನಾಥ ಪೈ ಮಾತನಾಡಿ ಸಾಮಾಜಿಕ ಕಳಕಳಿಯನ್ನು ಎನ್.ಎಸ್.ಎಸ್. ಕಲಿಸಿ ಜೀವನದಲ್ಲಿ ಸದೃಢರನ್ನಾಗಿ ಮಾಡಲು ಇಂತಹ ಶಿಬಿರಗಳು ಸಹಾಯ ಮಾಡುತ್ತದೆ ಎಂದರು.

ಪೆರ್ಡೂರು ಪ್ರೌಢಶಾಲೆ ಕನ್ನಡ ಮಾಧ್ಯಮ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ ಶಾಂತರಾಮ ಸೂಡ ಶಿಬಿರದ ಯಶಸ್ಸಿಗೆ ಹರ್ಷ ವ್ಯಕ್ತಪಡಿಸಿದರು. ಪೆರ್ಡೂರು ಪ್ರೌಢಶಾಲೆ ಕನ್ನಡ ಮಾಧ್ಯಮ ಇದರ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಡಾ. ಈ. ಎಸ್. ಕೆ. ಭಟ್, ಸದಸ್ಯರಾದ ರಾಜಕುಮಾರ ಶೆಟ್ಟಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್ ಯು., ಕಾರ್ಕಳ ಜ್ಞಾನಸುಧ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ವಾಣಿ, ಪೆರ್ಡೂರು ಪ್ರೌಢಶಾಲೆ ಕನ್ನಡ ಮಾಧ್ಯಮ ಇದರ ಮುಖ್ಯೋಪಾಧ್ಯಾಯರಾದ ಹಸೀನಾ ಭಾನು, ಪೆರ್ಡೂರು ಆಂಗ್ಲ ಮಾಧ್ಯಮ ಪ್ರೌಢಶಾಲೆ ಇದರ ಮುಖ್ಯೋಪಾಧ್ಯಾಯರಾದ ಶ್ವೇತಾ ಪ್ರಭು ಉಪಸ್ಥಿತರಿದ್ದರು.

ಶಿಬಿರದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು. ಸುದೇಶ್ ಶೆಟ್ಟಿ, ಯತಿನ್, ಪವಿನ್ ಮತ್ತು ತನ್ವಿ ಎಸ್ ಆಚಾರ್ಯ ಉತ್ತಮ ಸ್ವಯಂಸೇವಕ ಪ್ರಶಸ್ತಿ ಪಡೆದರು. ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥೆ ಶಮಿತಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮಣಿಪಾಲ ಜ್ಞಾನಸುಧಾ ಉಪಪ್ರಾಂಶುಪಾಲ ಹಾಗೂ ಕಾರ್ಯಕ್ರಮಾಧಿಕಾರಿ ರವಿ ಜಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾರಿ ಶಕ್ತಿಯ ಪ್ರತೀಕ ವೀರ ವನಿತೆ ಒನಕೆ ಓಬವ್ವ: ದಿನಕರ ಹೇರೂರು

ಉಡುಪಿ, ನ.11: ವೀರ ವನಿತೆ ಓಬವ್ವ ಎಂಬ ಪದ ಕೇಳಿದರೆ ಪ್ರತಿಯೊಬ್ಬರಿಗೂ...

ಡಾ. ಬಿ. ಬಿ ಹೆಗ್ಡೆ ಕಾಲೇಜು: ದೀಪಾವಳಿ ಸಂಭ್ರಮ

ಕುಂದಾಪುರ, ನ.11: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ತುಳು ಸಂಸ್ಕೃತಿ ಬೆಳಗಿದ ಆಕಾಶದೀಪ; ಇತಿಹಾಸ ನೆನಪಿಸಿದ ಪರ್ಕಳ ವಾಲಿಬಾಲ್​ ಫ್ರೆಂಡ್ಸ್​

ಕ್ರೀಡಾ ಕ್ಷೇತ್ರದೊಂದಿಗೆ ಸಾಮಾಜಿಕ ಕಾರ್ಯಗಳ ಮೂಲಕವೂ ನಾಡಿನ ಗಮನ ಸೆಳೆಯುವ ಪರ್ಕಳದ...

ಹಿಂದಿನ ಎಲ್ಲಾ ಸಾಧಕರು ಮಾತೃಭಾಷೆಯಲ್ಲೇ ಶಿಕ್ಷಣ ಪಡೆದಿದ್ದಾರೆ: ಸಾಹಿತಿ ಇಂದಿರಾ ಹಾಲಂಬಿ

ಉಡುಪಿ, ನ.9: ದೇಶ ಬಹಳಷ್ಟು ಪ್ರಗತಿ ಸಾಧಿಸಿದೆ. ಶೈಕ್ಷಣಿಕ, ತಾಂತ್ರಿ​ಕ ಕ್ಷೇತ್ರದಲ್ಲಿ...
error: Content is protected !!