ಉಡುಪಿ: ಕಾರ್ಮಿಕ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಜುಲೈ 15 ರಿಂದ ಆಗಸ್ಟ್ 15 ರ ವರೆಗೆ ಕಾರ್ಮಿಕ ಅದಾಲತ್ ಕಾರ್ಯಕ್ರಮ ನಡೆಯಲಿದ್ದು, ಕಾರ್ಮಿಕ ಅದಾಲತ್ ಕುರಿತು ಮಾಹಿತಿ ಹೊಂದಿರುವ ತೆರೆದ ವಾಹನ ರಥಕ್ಕೆ ಹಿರಿಯ ಸಿವಿಲ್ ನ್ಯಾಯ್ಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮತ್ತು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್ ಹಸಿರು ನಿಶಾನೆ ತೋರುವ ಮೂಲಕ ಜಿಲ್ಲಾ ಪಂಚಾಯತ್ ಆವರಣದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ಜಿಲ್ಲಾ ಪಂಚಾಯತಿಯ ಕಛೇರಿ ಸಿಬ್ಬಂದಿಗಳು ಹಾಗೂ ಕಾರ್ಮಿಕ ಇಲಾಖೆಯ ಕಛೇರಿ ಸಿಬಂದ್ಧಿಗಳು ಉಪಸ್ಥಿತರಿದ್ದರು.