ಕಾಪು, ನ.13: ಮುಂಬೈ ಪೊಲೀಸ್ ಇಲಾಖೆಯ ಫೋರ್ಸ್ ಒನ್ ಘಟಕದ ವಿಶೇಷ ಪೊಲೀಸ್ ಮಹಾನಿರೀಕ್ಷಕ ಐ. ಜಯಕುಮಾರ್ ಐಪಿಎಸ್ ಅವರು ಪತ್ನಿಯೊಂದಿಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಮಾರಿಯಮ್ಮ ದೇವಿ ಹಾಗೂ ಉಚ್ಚಂಗಿ ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿ ವತಿಯಿಂದ ಐ. ಜಯಕುಮಾರ್ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಅನುಗ್ರಹ ಪ್ರಸಾದ ನೀಡಿ ಆಶೀರ್ವದಿಸಿದರು.
ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಗೌರವಾಧ್ಯಕ್ಷ ರವಿ ಸುಂದರ್ ಶೆಟ್ಟಿ, ಉಪಾಧ್ಯಕ್ಷ ಮನೋಹರ್ ಎಸ್. ಶೆಟ್ಟಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಸೇರಿದಂತೆ ದೇವಸ್ಥಾನದ ಪ್ರಮುಖರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.




By
ForthFocus™