Sunday, November 15, 2026
Sunday, November 15, 2026

ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ: ಯಶ್ಪಾಲ್ ಸುವರ್ಣ

ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ: ಯಶ್ಪಾಲ್ ಸುವರ್ಣ

Date:

ಉಡುಪಿ, ನ.14: ಭಾರತ ದೇಶದ ಮುಂದಿನ ಭವಿಷ್ಯವನ್ನು ರೂಪಿಸಲಿರುವ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಉಡುಗೊರೆಯಾಗಿ ಕಳೆದ ವರ್ಷದಂತೆ ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ಸುಮಾರು 20,000 ವಿದ್ಯಾರ್ಥಿಗಳಿಗೆ ರೂ. 15 ಲಕ್ಷ ವೆಚ್ಚದಲ್ಲಿ ಪೆನ್ ವಿತರಣೆ ಮಾಡುವುದಾಗಿ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ತಿಳಿಸಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದ 127 ಶಾಲಾ ಕಾಲೇಜುಗಳಿಗೆ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ತೆರಳಿ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ ಮಾಡಲಿದ್ದಾರೆ ಎಂದರು.

ಉಡುಪಿ ಜಿಲ್ಲೆ ಶಿಕ್ಷಣ ವ್ಯವಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈಗಾಗಲೇ ಸರಕಾರಿ ಶಾಲಾ ಕಾಲೇಜುಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಸರಕಾರಿ ಅನುದಾನದ ಜೊತೆ ಜೊತೆಗೆ ಹಲವಾರು ಕಂಪೆನಿಗಳ ಸಿ. ಎಸ್. ಆರ್. ನಿಧಿ ಹಾಗೂ ದಾನಿಗಳ ಸಹಕಾರ ಪಡೆದು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಶಾಸಕನ ನೆಲೆಯಲ್ಲಿ ವಿಶೇಷ ಆದ್ಯತೆ ನೀಡಿ ಕಾರ್ಯಪ್ರವೃತ್ತವಾಗಿದ್ದೇನೆ ಎಂದರು.

ಪ್ರತಿವರ್ಷ ಶಾಲಾರಂಭದ ದಿನದಂದು ಕೂಡ ಕ್ಷೇತ್ರದ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ನೀಡಿ ಸ್ವಾಗತಿಸುವ ಕಾರ್ಯಕ್ರಮ ಮಾಡುತ್ತಿದ್ದು, ಹಲವು ವರ್ಷಗಳಿಂದ ನಿರಂತರವಾಗಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಹಾಗೂ ಪುಷ್ಪಾನಂದ ಫೌಂಡೇಶನ್ ಮೂರು ಸಂಸ್ಥೆಗಳ ಮೂಲಕವೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿ ಉತ್ತೇಜಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೆಟ್ ಬಾಲ್ ಪಂದ್ಯಾಟದಲ್ಲಿ ಸರಸ್ವತಿ ವಿದ್ಯಾಲಯಕ್ಕೆ ಅವಳಿ ಪ್ರಶಸ್ತಿ

ಉಡುಪಿ, ನ.14: ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಮೂಕಾಂಬಿಕಾ...

ಶಿಕ್ಷಣ-ಕ್ರೀಡೆ-ಸಾಂಸ್ಕೃತಿಕ-ಶಿಸ್ತು ಒಳಗೊಂಡ ಪರಿಪೂರ್ಣ ಸಂಸ್ಥೆ ಜ್ಞಾನಸುಧಾ: ಸೀತಾನದಿ ವಿಠಲ ಶೆಟ್ಟಿ

ಗಣಿತನಗರ, ನ.14: ವ್ಯಕ್ತಿ ಸದೃಢನಾಗಿರಲು ಕ್ರೀಡೆಯು ಬಹುಮುಖ್ಯ ಪಾತ್ರವಹಿಸುತ್ತದೆ. ದೈಹಿಕ ಶಕ್ತಿಯೇ...

ರಾಜ್ಯದ ಅಭಿವೃದ್ಧಿಗೆ ತುಳುನಾಡಿನ ಕೊಡುಗೆ ಮಹತ್ತರ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ನ.14: ಜನರನ್ನು ತಲುಪಲು ಆ ಪ್ರದೇಶದ ಭಾಷೆಯ ಕಲಿಕೆ ಅತೀ...

ಪಶು ಔಷಧಿ ವಿಕ್ರಯ ಕೇಂದ್ರಗಳ ಪ್ರಾರಂಭಕ್ಕೆ ಅರ್ಜಿ ಆಹ್ವಾನ

ಉಡುಪಿ, ನ.14: ಕೇಂದ್ರ ಸರ್ಕಾರದ ಆಂಊಆ ಇಲಾಖೆಯ ವತಿಯಿಂದ ಪಶುಪಾಲಕರಿಗೆ ಕೈಗೆಟುಕುವ...
error: Content is protected !!