Saturday, November 14, 2026
Saturday, November 14, 2026

ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಆದರ್ಶ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರ

ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಆದರ್ಶ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರ

Date:

ಉಡುಪಿ, ನ.14: ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಆದರ್ಶ ಆಸ್ಪತ್ರೆ, ಉಡುಪಿ ವತಿಯಿಂದ ನವೆಂಬರ್ 15, 2026ರ ಭಾನುವಾರದಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಆಸ್ಪತ್ರೆಯ ಆವರಣದಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಶಿಬಿರದಲ್ಲಿ ಸಾರ್ವಜನಿಕರಿಗೆ ಉಚಿತ ರಕ್ತದಲ್ಲಿನ ಸಕ್ಕರೆ ಪ್ರಮಾಣ ಪರೀಕ್ಷೆ (RBS), HbA1c, ಥೈರಾಯ್ಡ್ ಪರೀಕ್ಷೆ, ಮೂತ್ರ ಪರೀಕ್ಷೆ, ಕ್ರಿಯಾಟಿನಿನ್ ಪರೀಕ್ಷೆ ಹಾಗೂ ಲಿಪಿಡ್ ಪ್ರೊಫೈಲ್ ಪರೀಕ್ಷೆಗಳನ್ನು ಮಾಡಲಾಗುವುದು. ಜೊತೆಗೆ ತಜ್ಞ ವೈದ್ಯರಿಂದ ಆರೋಗ್ಯ ಸಮಾಲೋಚನೆಯ ಸೌಲಭ್ಯವೂ ಲಭ್ಯವಿರುತ್ತದೆ.

ಇದಲ್ಲದೆ, ನವೆಂಬರ್ 16ರಿಂದ 30ರವರೆಗೆ ವಿಶೇಷ ಡಯಾಬಿಟಿಸ್ ಕೇರ್ ಪ್ಯಾಕೇಜ್ ಅನ್ನು ಕೇವಲ ರೂ. 2,200ಕ್ಕೆ ಒದಗಿಸಲಾಗುತ್ತಿದೆ. ಈ ಪ್ಯಾಕೇಜ್‌ನಲ್ಲಿ CBC, ಮೂತ್ರ ಪರೀಕ್ಷೆ, ಲಿಪಿಡ್ ಪ್ರೊಫೈಲ್, FBS, PPBS, ಕ್ರಿಯಾಟಿನಿನ್, HbA1c, LFT, ಯೂರಿಕ್ ಆಸಿಡ್, ECG, ಎಕೋ/TMT ಹಾಗೂ ತಜ್ಞ ವೈದ್ಯರಿಂದ ಸಮಾಲೋಚನೆ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ಒಳಗೊಂಡಿದೆ.

ಮಧುಮೇಹವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ, ಸೂಕ್ತ ಚಿಕಿತ್ಸೆ ಹಾಗೂ ಜೀವನಶೈಲಿಯ ಬದಲಾವಣೆಗಳ ಮೂಲಕ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ಈ ಉಚಿತ ಶಿಬಿರದ ಸದುಪಯೋಗ ಪಡೆದುಕೊಂಡು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಆದರ್ಶ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ: ಯಶ್ಪಾಲ್ ಸುವರ್ಣ

ಉಡುಪಿ, ನ.14: ಭಾರತ ದೇಶದ ಮುಂದಿನ ಭವಿಷ್ಯವನ್ನು ರೂಪಿಸಲಿರುವ ವಿದ್ಯಾರ್ಥಿಗಳಿಗೆ ಮಕ್ಕಳ...

ಬಾಹ್ಯಾಕಾಶ ಖಾಸಗಿ ವಲಯಕ್ಕೆ ಮುಕ್ತಗೊಳಿಸಿದ್ದರಿಂದ ಮತ್ತಷ್ಟು ಉಪಗ್ರಹ ಕಕ್ಷೆಗೆ: ಮೈಸೂರಿನಲ್ಲಿ ಪ್ರಧಾನಿ ಮೋದಿ

ಮೈಸೂರು, ನ.14: ಕೇಂದ್ರ ಸರ್ಕಾರವು ಬಾಹ್ಯಾಕಾಶ ವಲಯವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸಿದ್ದು,...

ಕೇಂದ್ರ ಸಚಿವರಿಂದ ಅಜ್ಜರಕಾಡಿನ ಆಕಾಶವಾಣಿ ಕೇಂದ್ರದಲ್ಲಿ ಎಫ್‌ಎಂ ಪ್ರೇಷಕದ ಉದ್ಘಾಟನೆ

ಉಡುಪಿ, ನ.13: ಉಡುಪಿ ಎಫ್‌ಎಂ ಸೇವೆಯ ಕಾರ್ಯಾರಂಭದಿಂದಾಗಿ ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ...

ಸಿ.ಎ. ಫೌಂಡೇಶನ್‌ ಪರೀಕ್ಷೆ: ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಕುಂದಾಪುರ, ನ. 13: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ...
error: Content is protected !!