Saturday, November 14, 2026
Saturday, November 14, 2026

ಪ್ರಧಾನ ಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ: ನೋಂದಣಿಗೆ ಸೂಚನೆ

ಪ್ರಧಾನ ಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ: ನೋಂದಣಿಗೆ ಸೂಚನೆ

Date:

ಉಡುಪಿ, ನ.14: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಾಗೂ ಉದ್ದು ಮತ್ತು ನೆಲಗಡಲೆ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು 2026-27 ಯೋಜನೆಯ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ. ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ಅಧಿಸೂಚಿತ ಬೆಳೆಗಳ ವಿವರ ಹೀಗಿದೆ: ಭತ್ತ (ನೀರಾವರಿ) ದ ಬೆಳೆಗೆ ಉಡುಪಿ ತಾಲೂಕಿನ 2 ಗ್ರಾ.ಪಂ., ಕಾಪು ಹಾಗೂ ಬೈಂದೂರು ತಾಲೂಕಿನ ತಲಾ 01 ಗ್ರಾ.ಪಂ., ಬ್ರಹ್ಮಾವರ ತಾಲೂಕಿನ 6 ಗ್ರಾ.ಪಂ., ಕುಂದಾಪುರ ತಾಲೂಕಿನ 5 ಗ್ರಾ.ಪಂ., ಕಾರ್ಕಳ ತಾಲೂಕಿನ 18 ಗ್ರಾ.ಪಂ ಹಾಗೂ ಹೆಬ್ರಿ ತಾಲೂಕಿನ 3 ಗ್ರಾ. ಪಂಚಾಯತ್ ಸೇರಿದಂತೆ ಒಟ್ಟು 36 ಗ್ರಾಮ ಪಂಚಾಯತ್‌ಗಳನ್ನು ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದ್ದು, ವಿಮಾ ಮೊತ್ತ ಪ್ರತೀ ಹೆಕ್ಟೇರ್‌ಗೆ 1,08,600 ರೂ.ಗೆ, ವಿಮಾ ಕಂತಿನ ದರ ಪ್ರತೀ ಹೆ.ಗೆ 1,629 ರೂ.ಗಳಾಗಿದ್ದು, ನೋಂದಣಿಗೆ ಡಿಸೆಂಬರ್ 31 ಕೊನೆಯ ದಿನ.

ಮಳೆಯಾಶ್ರಿತ ಉದ್ದು ಬೆಳೆಗೆ ಉಡುಪಿ, ಬೈಂದೂರು, ಬ್ರಹ್ಮಾವರ, ವಂಡ್ಸೆ ಹಾಗೂ ಕೋಟ ಸೇರಿದಂತೆ ಒಟ್ಟು 5 ಹೋಬಳಿಗಳನ್ನು ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದ್ದು, ವಿಮಾ ಮೊತ್ತ ಪ್ರತಿ ಹೆ.ಗೆ 38,800 ರೂ. ಗೆ ವಿಮಾ ಕಂತಿನ ದರ 582 ರೂ ಗಳಾಗಿದ್ದು, ನೋಂದಣಿಗೆ ನವೆಂಬರ್ 30 ಕೊನೆಯ ದಿನ. ಮಳೆಯಾಶ್ರಿತ ನೆಲಗಡಲೆ ಬೆಳೆಗೆ ಬೈಂದೂರು ಹಾಗೂ ಕೋಟಾ ಹೋಬಳಿಗಳನ್ನು ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದ್ದು, ವಿಮಾ ಮೊತ್ತ ಪ್ರತಿ ಹೆ.ಗೆ 65,400 ರೂ.ಗೆ ವಿಮಾ ಕಂತಿನ ದರ ಪ್ರತಿ ಹೆ.ಗೆ 981 ರೂ. ನಿಗಧಿಪಡಿಸಲಾಗಿದ್ದು, ನೋಂದಣಿಗೆ ಡಿಸೆಂಬರ್ 31 ಕೊನೆಯ ದಿನವಾಗಿದೆ.

ರೈತರು ಪಹಣಿ ಪತ್ರ, ಖಾತೆ/ ಪಾಸ್‌ಪುಸ್ತಕ, ಆಧಾರ್ ಸಂಖ್ಯೆ, ಕಂದಾಯ ರಸೀದಿಗಳನ್ನು ಒದಗಿಸಿ, ಸ್ಥಳೀಯ ಸಾಲ ನೀಡುವ ವಾಣಿಜ್ಯ ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಬೆಳೆ ವಿಮಾ ಯೋಜನೆಯಿಂದ ರೈತರಿಗಾಗುವ ಪ್ರಯೋಜನಗಳು : ಮಳೆ ಅಭಾವ ಅಥವಾ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಅಧಿಸೂಚಿತ ಘಟಕದಲ್ಲಿ ಶೇ. 75 ರಷ್ಟು ಬಿತ್ತನೆಯಾಗದಿದ್ದಲ್ಲಿ ವಿಮೆ ಮಾಡಿಸಿದ ರೈತರಿಗೆ ವಿಮಾ ಮೊತ್ತದ ಶೇ. 25 ರಷ್ಟು ಪರಿಹಾರ ನೀಡಲಾಗುವುದು. ಅಧಿಸೂಚಿತ ಘಟಕದಲ್ಲಿ ಸಂಭವಿಸುವ ಹವಾಮಾನ ವೈಪರೀತ್ಯಗಳಾದ ಹೆಚ್ಚಿನ ಮಳೆ, ನೆರೆ/ ಪ್ರವಾಹದಿಂದ ಬೆಳೆ ಮುಳುಗಡೆ, ದೀರ್ಘಕಾಲ ತೇವಾಂಶ ಕೊರತೆ, ತೀವ್ರ ಬರಗಾಲ ಮುಂತಾದವುಗಳಿಂದ ಬಿತ್ತನೆಯಾದ 1 ತಿಂಗಳಿನಿಂದ ಕಟಾವಿನ 15 ದಿನ ಪೂರ್ವದವರೆಗಿನ ಬೆಳೆಯಲ್ಲಿ ಬೆಳೆ ನಷ್ಟವಾಗಿ ನಿರೀಕ್ಷಿತ ಇಳುವರಿಯು, ಪ್ರಾರಂಭಿಕ ಇಳುವರಿಯ ಶೇ.50ಕ್ಕಿಂತ ಕಡಿಮೆ ಇದ್ದಲ್ಲಿ ಅಥವಾ ಬೆಳೆ ನಷ್ಟ ಕಂಡುಬಂದಲ್ಲಿ ಮುಂಚಿತವಾಗಿ ವಿಮೆ ಮಾಡಿದ ರೈತರಿಗೆ ಶೇ.25 ರಷ್ಟು ಬೆಳೆ ನಷ್ಟ ಪರಿಹಾರ ದೊರೆಯಲಿದೆ. ಬೆಳೆ ಕಟಾವಿನ ವಾಸ್ತವಿಕ ಇಳುವರಿ ಆಧಾರದ ಮೇಲೆ ಅಂತಿಮ ಬೆಳೆ ನಷ್ಟ ಪರಿಹಾರದಲ್ಲಿ ಹೊಂದಾಣಿಕೆ.

ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ, ಮೇಘಸ್ಫೋಟ ಹಾಗೂ ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡಗಳಿಂದ ಬೆಳೆ ಹಾನಿಯಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದ್ದು, ಅಧಿಸೂಚಿಸಿದ ಘಟಕದಲ್ಲಿ ಶೇ.25 ಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಬೆಳೆ ನಷ್ಟವಾದಲ್ಲಿ ವಿಮೆಗೆ ಒಳಪಟ್ಟ ಬೆಳೆ ನಷ್ಟದ ವರದಿ ಮಾಡಿದ ರೈತರಿಗೆ ಮಾದರಿ ಸಮೀಕ್ಷೆಗೆ ಅನುಗುಣವಾಗಿ ಪರಿಹಾರ ನಿಡಲಾಗುವುದು. ಕಟಾವಿನ ನಂತರದ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ (ಕಟಾವು ಮಾಡಿದ 14 ದಿನಗಳ ಒಳಗೆ) ಚಂಡಮಾರುತ, ಅಕಾಲಿಕ ಮಳೆಯಿಂದ ಬೆಳೆ ನಾಶವಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದೆ. ಮೇಲಿನ ಎರಡೂ ಸಂದರ್ಭದಲ್ಲಿ ರೈತರು ವಿಮಾ ಸಂಸ್ಥೆ/ಆರ್ಥಿಕ ಸಂಸ್ಥೆ ಅಥಮಾ ಕೃಷಿ ಇಲಾಖಾ ಕಚೇರಿಗೆ 72 ಗಂಟೆಗಳ ಒಳಗಾಗಿ ಬೆಳೆ ಹಾನಿ ವಿವರದ ಮಾಹಿತಿ ಒದಗಿಸಬೇಕು.

ಪಿ.ಎಂ.ಎಫ್.ಬಿ.ವೈ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಇಂಡಸ್ ಇಂಡ್ ಜನರಲ್ ಇನ್ಸೂರೆನ್ಸ್ ಕಂಪೆನಿಯನ್ನು ವಿಮಾ ಕಂಪನಿಯಾಗಿ ಅನುಷ್ಠಾನಗೊಳಿಸಿದ್ದು, ಬೆಳೆ ಸಾಲ ಪಡೆದ ರೈತರು ಬೆಳೆ ವಿಮೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಕೊನೆಯ ದಿನಾಂಕದ ಒಂದು ವಾರದ ಮೊದಲು ಈ ಕುರಿತು ಮುಚ್ಚಳಿಕೆ ಪತ್ರ ನೀಡಿ ಬೆಳೆ ವಿಮೆಯಿಂದ ಕೈಬಿಡುವಂತೆ ಕೋರಬೇಕು. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೃಷಿ ಇಲಾಖೆಯ ಕಛೇರಿ, ವಾಣಿಜ್ಯ ಬ್ಯಾಂಕ್ ಅಥವಾ ಸಂಬಂಧಿಸಿದ ಸೇವಾ ಸಹಕಾರ ಸಂಘಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಶು ಔಷಧಿ ವಿಕ್ರಯ ಕೇಂದ್ರಗಳ ಪ್ರಾರಂಭಕ್ಕೆ ಅರ್ಜಿ ಆಹ್ವಾನ

ಉಡುಪಿ, ನ.14: ಕೇಂದ್ರ ಸರ್ಕಾರದ ಆಂಊಆ ಇಲಾಖೆಯ ವತಿಯಿಂದ ಪಶುಪಾಲಕರಿಗೆ ಕೈಗೆಟುಕುವ...

ಸ್ಥಿರಾಸ್ತಿಗಳ ಪರಿಷ್ಕತ ಮಾರುಕಟ್ಟೆ ದರ ಪ್ರಕಟ: ಆಕ್ಷೇಪಣೆ ಆಹ್ವಾನ

ಉಡುಪಿ, ನ.14: ಉಡುಪಿ ತಾಲೂಕು ವ್ಯಾಪ್ತಿಯ ಎಲ್ಲಾ ಸ್ಥಿರಾಸ್ತಿಗಳ ಮಾರುಕಟ್ಟೆ ದರಗಳನ್ನು...

ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಸತೀಶ್ ನಾಯಕ್

ಉಡುಪಿ, ನ.14: ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗದೆ, ಕ್ರೀಡೆ, ಸಾಂಸ್ಕೃತಿಕ...

ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಆದರ್ಶ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರ

ಉಡುಪಿ, ನ.14: ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಆದರ್ಶ ಆಸ್ಪತ್ರೆ, ಉಡುಪಿ...
error: Content is protected !!