ಉಡುಪಿ, ನ.14: ಕೇಂದ್ರ ಸರ್ಕಾರದ ಆಂಊಆ ಇಲಾಖೆಯ ವತಿಯಿಂದ ಪಶುಪಾಲಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ಔಷಧಿ (Generic & Ethno Veterinary Medicine) ಒದಗಿಸುವ ನಿಟ್ಟಿನಲ್ಲಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೊಂದರಂತೆ ಬಿ.ಫಾರಂ/ ಡಿ.ಫಾರಂ ಪದವೀಧರರ ನೇಮಕಾತಿಯೊಂದಿಗೆ ಪಶು ಔಷಧಿ ವಿಕ್ರಯ ಕೇಂದ್ರಗಳನ್ನು ಪ್ರಾರಂಭಿಸಲು, ಪಿ.ಎಂ ಕಿಸಾನ ನೆಮ್ಮದಿ ಕೇಂದ್ರ, ಹಾಲು ಉತ್ಪಾದಕರ ಸಹಕಾರಿ ಸಂಘ, ರೈತ ಸಂಪರ್ಕ ಕೇಂದ್ರ ಮತ್ತು ಇತರೇ ನೊಂದಾಯಿತ ಸಹಕಾರಿ ಸಂಘಗಳಿಂದ ಇಲಾಖೆಯ ವೆಬ್‌ಸೈಟ್ https:/www.dahd.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸಂಘ ಸಂಸ್ಥೆಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನೋಡಲ್ ಅಧಿಕಾರಿಗಳು, ಪಶುವೈದ್ಯಕೀಯ ಪಾಲಿಕ್ಲಿನಿಕ್, ಉಡುಪಿ ಮೊ.ನಂ: 9845259740 ಅಥವಾ ಉಪನಿರ್ದೇಶಕರು (ಆಡಳಿತ), ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ, ಉಡುಪಿ ಮೊ.ನಂ: 9448662556 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಪಶು ಔಷಧಿ ವಿಕ್ರಯ ಕೇಂದ್ರಗಳ ಪ್ರಾರಂಭಕ್ಕೆ ಅರ್ಜಿ ಆಹ್ವಾನ
ಪಶು ಔಷಧಿ ವಿಕ್ರಯ ಕೇಂದ್ರಗಳ ಪ್ರಾರಂಭಕ್ಕೆ ಅರ್ಜಿ ಆಹ್ವಾನ
Date:




By
ForthFocus™