Monday, November 16, 2026
Monday, November 16, 2026

‘ಉಗಮ- 2026’ ಸಂಪನ್ನ

‘ಉಗಮ- 2026’ ಸಂಪನ್ನ

Date:

ಕುಂದಾಪುರ, ನ.15: ವಿದ್ಯಾರ್ಥಿಗಳಲ್ಲಿ ಧನಾತ್ಮಕ ಸ್ಪರ್ಧಾ ಮನೋಭಾವವನ್ನು ಬೆಳೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಎಳವೆಯಲ್ಲಿಯೇ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಶಿಕ್ಷಣದ ನಿಜವಾದ ಅರ್ಥವನ್ನು ಅರಿತುಕೊಳ್ಳಬೇಕು ಎಂದು ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಶ್ರೀ ಹುಂತ್ರಿಕೆ ಸುಧಾಕರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ವತಿಯಿಂದ ಪದವಿಪೂರ್ವ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಸಾಹಿತ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ- ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರೇಷ್ಮಾ ಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿಗಳಾದ ವಿಕಾಸ್ ಶೆಟ್ಟಿ, ಖುಷಿ ಶೆಟ್ಟಿ, ಅಭಿಷೇಕ್ ಕುಲಾಲ್ ಹಾಗೂ ನಿಶಾಂತ್ ಡಿಸೋಜ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಸತೀಶ್ ಶೆಟ್ಟಿ ಹೆಸ್ಕತ್ತೂರು ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ರವಿನಂದನ್ ಭಟ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಕೋಟದ ವಿವೇಕ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರೆ, ಕುಂದಾಪುರದ ವೆಂಕಟರಮಣ ಪದವಿಪೂರ್ವ ಕಾಲೇಜು ದ್ವಿತೀಯ ಸಮಗ್ರ ಪುರಸ್ಕಾರವನ್ನು ತನ್ನದಾಗಿಸಿಕೊಂಡಿತು.  ವಾಲಿಬಾಲ್‌ನಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಬಿದ್ಕಲ್‌ಕಟ್ಟೆ ಪ್ರಥಮ ಹಾಗೂ ಸರ್ಕಾರಿ ಪ್ರೌಢಶಾಲೆ, ಬಸ್ರೂರು ದ್ವಿತೀಯ ಸ್ಥಾನ ಗಳಿಸಿದವು. ಕಬಡ್ಡಿಯಲ್ಲಿ ಸರ್ಕಾರಿ ಪ್ರೌಢಶಾಲೆ, ಕಂಬದಕೋಣೆ ಪ್ರಥಮ ಹಾಗೂ ವಿ.ಕೆ.ಆರ್. ಆಚಾರ್ಯ ಪ್ರೌಢಶಾಲೆ, ಕುಂದಾಪುರ ದ್ವಿತೀಯ ಸ್ಥಾನ ಪಡೆದುಕೊಂಡವು. ತ್ರೋಬಾಲ್‌ನಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ಪ್ರಥಮ ಹಾಗೂ ವಿ.ಕೆ.ಆರ್. ಆಚಾರ್ಯ ಪ್ರೌಢಶಾಲೆ, ಕುಂದಾಪುರ ದ್ವಿತೀಯ ಸ್ಥಾನ ಗಳಿಸಿದವು.

ವೈಯಕ್ತಿಕ ಪ್ರಶಸ್ತಿಗಳಲ್ಲಿ ಕಬಡ್ಡಿಯ ಬೆಸ್ಟ್ ರೈಡರ್ ಪ್ರಶಸ್ತಿಯನ್ನು ಸರ್ಕಾರಿ ಪ್ರೌಢಶಾಲೆ, ಕಂಬದಕೋಣೆಯ ಹರ್ಷ, ವಾಲಿಬಾಲ್‌ನ ಬೆಸ್ಟ್ ಅಟ್ಯಾಕರ್ ಪ್ರಶಸ್ತಿಯನ್ನು ಸರ್ಕಾರಿ ಪ್ರೌಢಶಾಲೆ, ಬಸ್ರೂರಿನ ಸುಶೀರ್ ಹಾಗೂ ಬೆಸ್ಟ್ ಪಾಸರ್ ಪ್ರಶಸ್ತಿಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್, ಬಿದ್ಕಲ್‌ಕಟ್ಟೆಯ ಶಶಾಂಕ್ ಪಡೆದುಕೊಂಡರು. ತ್ರೋಬಾಲ್‌ನ ಬೆಸ್ಟ್ ಪ್ಲೇಯರ್ ಪ್ರಶಸ್ತಿಯನ್ನು ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರದ ಅದಿತಿ ತಮ್ಮದಾಗಿಸಿಕೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಖೇಲೋ ಇಂಡಿಯಾ ಯೂತ್ ಗೇಮ್ಸ್’ನ 8ನೇ ಆವೃತ್ತಿಯ ಲೋಗೋ ಮತ್ತು ಮ್ಯಾಸ್ಕಾಟ್ ಅನಾವರಣ

ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಮತ್ತು...

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಮತ್ತೊಮ್ಮೆ ಚಂಡಮಾರುತ ಸಾಧ್ಯತೆ

ನವದೆಹಲಿ, ನ.15: ಆಗ್ನೇಯ ಮತ್ತು ಅದನ್ನು ಹೊಂದಿಕೊಂಡಿರುವ ನೈರುತ್ಯ ಬಂಗಾಲ ಕೊಲ್ಲಿಯಲ್ಲಿ...

ಉಡುಪಿ ಸಂಪೂರ್ಣ ಸಾಕ್ಷರತಾ ಜಿಲ್ಲೆ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಕೊಡುಗೆ ಅಪಾರ: ಯಶ್ಪಾಲ್ ಸುವರ್ಣ

ಉಡುಪಿ, ನ. 15: ವಿಶ್ವದಲ್ಲಿಯೇ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ರಾಷ್ಟ್ರ...
error: Content is protected !!