Monday, November 16, 2026
Monday, November 16, 2026

ಉಡುಪಿ ಸಂಪೂರ್ಣ ಸಾಕ್ಷರತಾ ಜಿಲ್ಲೆ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಕೊಡುಗೆ ಅಪಾರ: ಯಶ್ಪಾಲ್ ಸುವರ್ಣ

ಉಡುಪಿ ಸಂಪೂರ್ಣ ಸಾಕ್ಷರತಾ ಜಿಲ್ಲೆ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಕೊಡುಗೆ ಅಪಾರ: ಯಶ್ಪಾಲ್ ಸುವರ್ಣ

Date:

ಉಡುಪಿ, ನ. 15: ವಿಶ್ವದಲ್ಲಿಯೇ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ರಾಷ್ಟ್ರ ನಮ್ಮ ಭಾರತ,. ಉಡುಪಿ ಜಿಲ್ಲೆ ರಾಜ್ಯದ ಪ್ರಥಮ ಸಂಪೂರ್ಣ ಸಾಕ್ಷರತಾ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಈ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಕೊಡುಗೆ ಅಪಾರವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ನಿರ್ಮಾಣದ ಸಂಕಲ್ಪಕ್ಕೆ ವಿದ್ಯಾರ್ಥಿಗಳೇ ಪ್ರೇರಣೆಯಾಗಿದ್ದಾರೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.

ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ 15 ಲ.ರೂ. ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್ ವಿತರಣೆ ಕಾರ್ಯಕ್ರಮಕ್ಕೆ ಕಡೆಕಾರು ಸರಕಾರಿ ಮಾದರಿ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೆನ್ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.

ಓರ್ವ ಶಾಸಕನಾಗಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯಪ್ರವೃತ್ತರಾಗಿದ್ದು, ಶಾಲಾ ಕಾಲೇಜುಗಳ ಮೂಲ ಸೌಕರ್ಯ ಅಭಿವೃದ್ಧಿ, ವಿದ್ಯಾರ್ಥಿ ನಿಲಯ ಹಾಗೂ ಶಿಕ್ಷಣಕ್ಕೆ ಪೂರಕ ವ್ಯವಸ್ಥೆಗಳ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯ ಸಹಕಾರ ನೀಡುವ ಭರವಸೆ ನೀಡಿದರು.

ಉಡುಪಿ ಕ್ಷೇತ್ರದ ವಿವಿಧ ಶಾಲೆ ಹಾಗೂ ಕಾಲೇಜುಗಳಿಗೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ತೆರಳಿ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ ಮಾಡಿ ಶುಭ ಹಾರೈಸಿದರು.

ಸ್ಥಳೀಯ ಮುಖಂಡರಾದ ರಘುನಾಥ ಕೋಟ್ಯಾನ್, ಗಂಗಾಧರ ಜಿ., ಪ್ರದೀಪ್ ಚಂದ್ರ ಕುತ್ಪಾಡಿ, ಸುನೀಲ್ ಸಾಲ್ಯಾನ್, ಶೇಖರ್ ಅಂಚನ್, ದೀಪಕ್ ಪುತ್ರನ್, ಜಯಕರ ಸನಿಲ್, ನಂದ ಕುಮಾರ್, ವನಜ ಜಯಕರ್, ವಿನೋದಿನಿ, ಅರುಣ್ ಕಡೆಕಾರ್, ಅಶೋಕ್ ಪಾಲನ್, ಶಾಲೆಯ ಮುಖ್ಯ ಶಿಕ್ಷಕಿ ವನಜಾಕ್ಷಿ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಖೇಲೋ ಇಂಡಿಯಾ ಯೂತ್ ಗೇಮ್ಸ್’ನ 8ನೇ ಆವೃತ್ತಿಯ ಲೋಗೋ ಮತ್ತು ಮ್ಯಾಸ್ಕಾಟ್ ಅನಾವರಣ

ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಮತ್ತು...

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಮತ್ತೊಮ್ಮೆ ಚಂಡಮಾರುತ ಸಾಧ್ಯತೆ

ನವದೆಹಲಿ, ನ.15: ಆಗ್ನೇಯ ಮತ್ತು ಅದನ್ನು ಹೊಂದಿಕೊಂಡಿರುವ ನೈರುತ್ಯ ಬಂಗಾಲ ಕೊಲ್ಲಿಯಲ್ಲಿ...

ಹಾವಂಜೆ ವ್ಯಾಪ್ತಿಯ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಬ್ರಹ್ಮಾವರ, ನ.15: ಕೆ. ಜಿ. ರೋಡ್ ಪೆರ್ಡೂರು ರಾಜ್ಯ ಹೆದ್ದಾರಿಯ ಹಾವಂಜೆ...
error: Content is protected !!