Monday, November 16, 2026
Monday, November 16, 2026

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿ

Date:

ಕಾಪು, ನ.೧೬: ಉಡುಪಿ ಜಿಲ್ಲೆಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸರಕಾರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ ಕುಮಾರಸ್ವಾಮಿ ಕುಟುಂಬ ಸಮೇತ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು. ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಲಾಯಿತು.

ದೇವಳದ ನವನಿರ್ಮಾಣದ ಬಗ್ಗೆ ಮತ್ತು ನವದುರ್ಗಾ ಲೇಖನ ಯಜ್ಞದ ಬಗ್ಗೆ ಸವಿವರವಾದ ಮಾಹಿತಿಯನ್ನು ಒದಗಿಸಿದರು ಮತ್ತು ದ್ವಿತೀಯ ಹಂತದ ಕಾಮಗಾರಿಯ ಸಮಗ್ರ ಚಿತ್ರಣದೊಂದಿಗೆ ಸರಕಾರದಿಂದ ಅನುದಾನ ನೀಡುವ ಕುರಿತು ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಮನವಿ ನೀಡಿದರು.

ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ ಕುಮಾರಗುರು ತಂತ್ರಿ, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ ಪ್ರಾರ್ಥಿಸಿ ಅನುಗ್ರಹ ಪ್ರಸಾದ ನೀಡಿದರು. ಘಂಟಾನಾದವನ್ನು ಸಚಿವರ ಸಹಿತ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ರೇವತಿ, ಮೊಮ್ಮಗ ಅವ್ಯಾನ್ ದೇವ್ ಹಾಗೂ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅವರು ನೆರವೇರಿಸಿದರು. ಬಳಿಕ ದೇವಿಗೆ ಕಾರ್ತಿಕ ಮಾಸದ ವಿಶೇಷ ಸೇವೆಯಾಗಿ ತುಪ್ಪದ ದೀಪವನ್ನು ಬೆಳಗಿಸಿದರು.

ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮೋಹಿದ್ದಿನ್ ಬಾವ, ಉತ್ತರ ಕನ್ನಡ ಜಿಲ್ಲೆಯ ಕಾರವಾರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮತ್ತು ಕರ್ನಾಟಕ ಸರಕಾರದ ಮಾಜಿ ಸಚಿವ ಆನಂದ್ ವಸಂತ್ ಅಸ್ನೋಟಿಕರ್, ಜಾತ್ಯಾತೀತ ಜನತಾದಳ ರಾಜ್ಯ ಉಪಾಧ್ಯಕ್ಷ ಸೂರಜ್ ನಾಯ್ಕ್ ಸೋನಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್.ಪಾಲನ್, ಶೇಖರ್ ಸಾಲ್ಯಾನ್, ಮನೋಹರ್ ರಾವ್ ಕಲ್ಯ, ರವೀಂದ್ರ ಮಲ್ಲಾರ್, ಜಯಲಕ್ಷ್ಮೀ ಎಸ್.ಶೆಟ್ಟಿ, ಚರಿತಾ ದೇವಾಡಿಗ, ಆರ್ಗಾನಿಕ್ ಇಂಡಸ್ಟ್ರೀಸ್ ಪ್ರೈ. ಲಿ. ಮುಂಬೈ ಆಡಳಿತ ನಿರ್ದೇಶಕ ಆನಂದ ಎಮ್. ಶೆಟ್ಟಿ, ಅದಾನಿ ಸಮೂಹ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಆಸ್ಪೆನ್ ಎಸ್‌ಇಝೆಡ್‌ನ ಮಹಾ ಪ್ರಬಂಧಕ ಅಶೋಕ್ ಶೆಟ್ಟಿ, ಕೆ. ಭಗವಾನ್ ದಾಸ್, ಜಯರಾಮ್ ಆಚಾರ್ಯ, ಗೀತಾಂಜಲಿ ಸುವರ್ಣ, ಶ್ರೀಕರ ಶೆಟ್ಟಿ ಕಲ್ಯ, ಸಾವಿತ್ರಿ ಗಣೇಶ್, ರವಿಕುಮಾರ್ ಮಂದಾರ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ರವಿರಾಜ್ ಶೆಟ್ಟಿ ಪಂಜಿತ್ತೂರು, ಉದಯ ಹೆಗ್ಡೆ, ಉದಯ ಶೆಟ್ಟಿ ಕೊಪ್ಪಲಂಗಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲಾವಿದರೆಂದರೆ ಕಲಾತಪಸ್ವಿಗಳು: ಪೇಜಾವರ ಶ್ರೀ

ಉಡುಪಿ, ನ.16: ತಮ್ಮ ಬದುಕನ್ನೇ ಯಕ್ಷಗಾನಕ್ಕೆ ಮುಡಿಪಾಗಿಟ್ಟು ಕಲಾರಸಿಕರನ್ನು ರಂಜಿಸಿ ಯಕ್ಷಗಾನವನ್ನು...

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹಕ್ಕೆ ಚಾಲನೆ

ಉಡುಪಿ, ನ.16: ನಗರದ ಕವಿ ಮುದ್ದಣ ಮಾರ್ಗದಲ್ಲಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆಯ...

ಬಾಲಕಾರ್ಮಿಕ ಪದ್ಧತಿ ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ

ಧಾರವಾಡ, ನ.16: ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವುದು...
error: Content is protected !!