Wednesday, November 18, 2026
Wednesday, November 18, 2026

ತೆಂಕನಿಡಿಯೂರು ಕಾಲೇಜು: ಯುವ ನಿಧಿ ಯೋಜನೆ ಅರಿವು ಕಾರ್ಯಕ್ರಮ

ತೆಂಕನಿಡಿಯೂರು ಕಾಲೇಜು: ಯುವ ನಿಧಿ ಯೋಜನೆ ಅರಿವು ಕಾರ್ಯಕ್ರಮ

Date:

ಉಡುಪಿ, ನ.17: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಐ.ಕ್ಯೂ.ಎ.ಸಿ ಉದ್ಯೋಗ ಮಾರ್ಗದರ್ಶನ ಘಟಕ ಹಾಗೂ ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ‘ಯುವ ನಿಧಿ ಯೋಜನೆ ಅರಿವು ಕಾರ್ಯಕ್ರಮ’ವು ಕಾಲೇಜು ಸಭಾಂಗಣದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಉಡುಪಿ ತಾಲೂಕು ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಮಾತನಾಡಿ, ಪದವಿ ಹಾಗೂ ಡಿಪ್ಲೊಮಾ ಮುಗಿಸಿ ಉದ್ಯೋಗಕ್ಕಾಗಿ ಎದುರು ನೋಡುತ್ತಿರುವ ಯುವಜನತೆಗೆ ಆರ್ಥಿಕ ಭದ್ರತೆ ಮತ್ತು ಕೌಶಲ್ಯ ತರಬೇತಿ ನೀಡುವ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿರುವ ಯುವ ನಿಧಿ ಯೋಜನೆಯ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಲಹೆಗಾರರು ಮತ್ತು ತರಬೇತುದಾರರಾದ ಲಕ್ಷ್ಮೀ ಸುವರ್ಣ ಅವರು ಯುವ ನಿಧಿ ಯೋಜನೆಯ ಅರ್ಹತಾ ಮಾನದಂಡಗಳು, ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳು ಹಾಗೂ ಯೋಜನೆಯಡಿ ದೊರೆಯುವ ಮಾಸಿಕ ನಿರುದ್ಯೋಗ ಭತ್ಯೆ (ಪದವೀಧರರಿಗೆ ರೂ.3,000 ಹಾಗೂ ಡಿಪ್ಲೊಮಾಧಾರರಿಗೆ ರೂ.1,500) ಮತ್ತು ಉಚಿತ ಕೌಶಲ್ಯ ತರಬೇತಿ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾಂವ್ಕರ್ ಅವರು ವಹಿಸಿದ್ದರು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಮಾಹಿತಿಯನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅವರು ಆಶಿಸಿದರು.

ಸಮಾರಂಭದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳಾದ ವಿನೋದ್ ನಾಯ್ಕ್, ಪ್ರಥ್ವಿರಾಜ್, ಶೈಕ್ಷಣಿಕ ಸಲಹೆಗಾರ ಡಾ. ಶ್ರೀಧರ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಶ್ರೀ ದೇವಿ ಕೆ., ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿಗಳಾದ ಬಿಂದು ಟಿ. ಹಾಗೂ ಮರ್ವಿನ್ ಡಿಸೋಜಾ ಉಪಸ್ಥಿತರಿದ್ದರು. ಕಾಲೇಜಿನ ಅಧ್ಯಾಪಕ ವೃಂದ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡು ಯೋಜನೆಯ ಕುರಿತು ಮಾಹಿತಿ ಪಡೆದುಕೊಂಡರು. ಸಹನಾ ಸ್ವಾಗತಿಸಿ, ಆಶ್ರಿತ್ ವಂದಿಸಿದರು, ಲಕ್ಷ್ಮೀ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸನ್ಮತಿ ಮಾಸಿಕ ಸಂಚಿಕೆ ಬಿಡುಗಡೆ, ತಿಂಗಳ ಅಂಗಳ ಸಂವಾದ

ಉಡುಪಿ, ನ.18: ಎಲ್‌ನಿನೋ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ಕಾಡುವ ಕುಡಿಯುವ ನೀರಿನ ಸಮಸ್ಯೆ...

ಕಡೆಕಾರು: ಉಚಿತ ಕಣ್ಣಿನ ತಪಾಸಣಾ ಶಿಬಿರ

ಉಡುಪಿ, ನ.18: ಕೆ.ಎಂ.ಸಿ. ಮಣಿಪಾಲದ ಕಣ್ಣಿನ ವಿಭಾಗ, ಆಪ್ಟೋಮಿಟ್ರಿ ವಿಭಾಗ ಹಾಗೂ...

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರ ರಿಯಾಯಿತಿ

ಉಡುಪಿ, ನ.17: ಕನ್ನಡ ರಾಜ್ಯೋತ್ಸವದ ಅಂಗವಾಗಿ 2026 ರ ನವೆಂಬರ್ ತಿಂಗಳು...
error: Content is protected !!