ಉಡುಪಿ, ನ.18: ಕೆ.ಎಂ.ಸಿ. ಮಣಿಪಾಲದ ಕಣ್ಣಿನ ವಿಭಾಗ, ಆಪ್ಟೋಮಿಟ್ರಿ ವಿಭಾಗ ಹಾಗೂ ಸಮುದಾಯ ವೈದ್ಯಕೀಯ ವಿಭಾಗ ಮತ್ತು ಫ್ಯಾಮಿಲಿ ಮೆಡಿಸಿನ್ ವಿಭಾಗದ ಸಹಯೋಗದೊಂದಿಗೆ ಕಡೆಕಾರು ಬಿಲ್ಲವ ಸಂಘದ ಸಭಾಭವನದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಶಿಬಿರವು ಕೆ.ಎಂ.ಸಿ. ಮಣಿಪಾಲದ ಕಣ್ಣಿನ ವಿಭಾಗದ ಪ್ರಾಧ್ಯಾಪಕರು ಮತ್ತು ವಿಭಾಗ ಮುಖ್ಯಸ್ಥರಾದ ಡಾ. ಯೋಗಿಶ್ ಕಾಮತ್, ಪ್ರಾಧ್ಯಾಪಕರಾದ ಡಾ. ಸುಲತಾ ಭಂಡಾರಿ ಹಾಗೂ ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಅಶ್ವಿನಿ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಶಿಬಿರದಲ್ಲಿ ಸಮುದಾಯ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಸ್ನೇಹ ಡಿ. ಮಲ್ಯ, ಡಾ. ದಿವ್ಯಾ ಅರವಿಂದ ಪ್ರಭು, ಫ್ಯಾಮಿಲಿ ಮೆಡಿಸಿನ್ ವಿಭಾಗದ ಡಾ. ಅನುನಾ, ಆಪ್ಟೋಮಿಟ್ರಿ ವಿಭಾಗದ ಪ್ರೀತಿ ಹಾಗೂ ಕಣ್ಣಿನ ವಿಭಾಗದ ಸಿಬ್ಬಂದಿಗಳು ಹಾಗೂ ಸಮುದಾಯ ವೈದ್ಯಕೀಯ ವಿಭಾಗದ ಸಿಬ್ಬಂದಿಗಳು ಹಾಗೂ ಕ್ಷೇತ್ರ ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು. ಶಿಬಿರದಲ್ಲಿ ಕಣ್ಣಿನ ತಪಾಸಣೆ, ರಕ್ತ ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಯಿತು. ಶಿಬಿರದಲ್ಲಿ 71 ಜನರು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಕಡೆಕಾರು: ಉಚಿತ ಕಣ್ಣಿನ ತಪಾಸಣಾ ಶಿಬಿರ
ಕಡೆಕಾರು: ಉಚಿತ ಕಣ್ಣಿನ ತಪಾಸಣಾ ಶಿಬಿರ
Date:




By
ForthFocus™